• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕುರ್ಚಿ ಗಟ್ಟಿ ಇದೆ, ಹಗಲುಗನಸು ಕಾಣಬೇಡಿ! ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧ ಗಣಿಗ ರವಿಕುಮಾರ್‌ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
November 6, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಂಡ್ಯ: ರಾಜ್ಯದಲ್ಲಿ ವಕ್ಫ್‌ (Waqf) ವಿವಾದ ವಿಚಾರಕ್ಕೆ ಸಂಬಂಧಿಸಿ ಪಕ್ಷಗಳ ನಡುವೆ ವಾಕ್‌ಸಮರ ಶುರುವಾಗಿದೆ. ಇದರ ಮಧ್ಯೆ ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ಅವರ (Siddaramaiah) ವಿರುದ್ದ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಷಡ್ಯಂತ್ರ ನಡೆಸುತ್ತಿದೆ.

ADVERTISEMENT

ಸಿದ್ದರಾಮಯ್ಯ ಲೋಕಾಯುಕ್ತ (Lokayukta) ವಿಚಾರಣೆ ವಿಚಾರದಲ್ಲಿ ಕೂಡ ದೊಡ್ಡ ಷಡ್ಯಂತರ ಇದೆ ಎಂದು ಶಾಸಕ ಗಣಿಗ ರವಿಕುಮಾರ್ (Ganiga Ravikumar) ಆರೋಪಿಸಿದ್ದಾರೆ.

ಕುಮಾರಣ್ಣನಿಗೆ ಹಗಲು ಗನಸು:

ರಾಜ್ಯದಲ್ಲಿ ಮತ್ತೆ ನಾನು ಮುಖ್ಯಮಂತ್ರಿ ಆಗ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರವಿಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಕುಮಾರಣ್ಣ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ. ಕೊಟ್ಟಾಗ ಕುದುರೆ ಏರಲ್ಲ, ಬಿದೋಗ್ತಾರೆ, ಬಿದ್ದಾಗ ಮತ್ತೆ ಕುದುರೆ ಹಿಡಿಯೋದಕ್ಕೆ ಓಡ್ತಾರೆ. 19 ಸೀಟ್ ಬಂದು ಮುಖ್ಯಮಂತ್ರಿ ಆಗ್ತಿನಿ ಅನ್ನೋದು ಅಸಾಧ್ಯ. ನಮ್ಮನ್ನೆಲ್ಲ ರೆಬಲ್ ಒಕ್ಕಲಿಗರು ಎಂದು ಅಂದುಕೊಂಡಿದ್ದಾರೆ. ಆದರೆ ನಾವೇ ಒರಿಜಿನಲ್ ಒಕ್ಕಲಿಗರು ಹಾಗೂ ಕೆಲಸ ಮಾಡೋದು ಸಹ ನಾವೇ. ಅವರು ಏನು ಮಾಡಲ್ಲ. ಇನ್ನು ಚನ್ನಪಟ್ಟಣದಲ್ಲಿ ಯಾವ ಕೆಲಸವನ್ನೂ ಮಾಡಿಲ್ಲ.

ನಾನು ಶಾಸಕನಾಗಿ ಅಭಿವೃದ್ಧಿ ಮಾಡಿದ್ದೇನೆ. ಇನ್ನು 10 ಸಾವಿರ ಮತದಿಂದ ಯೋಗೇಶ್ವರ್ ಗೆಲ್ಲೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಗಣಿಗ ರವಿಕುಮಾರ್‌ ಹೇಳಿದ್ದಾರೆ.

ಮಂಡ್ಯದ ಬಸರಾಳು ಗ್ರಾಮದಲ್ಲಿ ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕ ಎರಡನೇ ಬಾರಿ ಸಿಎಂ ಆಗಿದ್ದಾರೆ ಅಂತ ಬಿಜೆಪಿ-ಜೆಡಿಎಸ್ ಸೇರಿ ಸರ್ಕಾರ ಅಸ್ಥಿರ ಮಾಡಲು ಹೊರಟಿದೆ. 50ಕೋಟಿ ಆಮೀಷವೊಡ್ಡಿ ಶಾಸಕರನ್ನ ಖರೀದಿ ಮಾಡಲು ಹೊರಟಿದ್ದಾರೆ. ಆದರೆ ಆ ಕೆಲಸ ಅವರಿಂದ ಆಗಲಿಲ್ಲ. ಕಾಂಗ್ರೆಸ್‌ ಸರ್ಕಾರ ಹೆಸರು ಮಾಡುತ್ತೆ ಎಂದು ಸಿಎಂ ಅವರನ್ನ ಮುಡಾ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುತ್ತೇವೆ. ಯಾರನ್ನ ಒಳಗೆ ಹಾಕಿಸಬೇಕು ಹಾಕಿಸ್ತೇವೆ‌. ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಲು ಬಂದಿದಕ್ಕೆ ನಮ್ಮ ಬಳಿ ಸರಿಯಾದ ದಾಖಲೆ ಇದೆ.

ಸಿಎಂ ಕುರ್ಚಿ ಗಟ್ಟಿಯಾಗಿದೆ, ಆದರೂ ಕುತಂತ್ರದಿಂದ ಅಲುಗಾಡಿಸಲು ಪ್ರಯತ್ನ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಸಿಎಂ ಕುರ್ಚಿ ಅಲ್ಲಾಡಿಸಲಾಗಲ್ಲ. ನಾವು ಶಾಸಕರಾಗಿ ಎಷ್ಟು ಅವಧಿ ಇರ್ತಿವೋ ಅನ್ನೋದು ಮುಖ್ಯ ಅಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಮಾಡೋದು ಮುಖ್ಯ. ಯಾವತ್ತೊ ಒಂದಿನ ಮಾಜಿ ಆಗಲೇಬೇಕು. ಆದರೆ ಅಭಿವೃದ್ಧಿ ಮಾಡೋದು ನಮ್ಮ ಕೆಲಸ ಎಂದು ರವಿಕುಮಾರ್‌ ಹೇಳಿದ್ದಾರೆ

Tags: 19 seats.BJPChannapatnam by-electionCongress PartyDaydreaming Kumaranna for CMMLA Ganiga Ravikumarwinning by 10 thousand votes.Yogeshwar
Previous Post

ಮಂಡ್ಯ ;ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್-ಬಿಜೆಪಿ ಷಡ್ಯಂತ್ರ.

Next Post

ವಿಜಯೇಂದ್ರ ವಿರುದ್ಧ ಗಣಿಗ ರವಿ ವಾಗ್ದಾಳಿ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post

ವಿಜಯೇಂದ್ರ ವಿರುದ್ಧ ಗಣಿಗ ರವಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada