• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “ಫಾರೆಸ್ಟ್”ಚಿತ್ರ ಸದ್ಯದಲ್ಲೇ ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
November 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಶೀರ್ಷಿಕೆ, ತಾರಾಗಣ ಹಾಗೂ ಕನ್ಸೆಪ್ಟ್ ನಿಂದಲೇ ಬಹು ನಿರೀಕ್ಷೆಯಿರುವ “ಫಾರೆಸ್ಟ್” ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದ್ದು, ಕೆಲವೇ ದಿನಗಳಲ್ಲಿ ಬಹು ನಿರೀಕ್ಷಿತ ಈ ಚಿತ್ರ ತೆರೆಗೆ ಬರಲಿದೆ.

ADVERTISEMENT

ಸಿನಿಮಾ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫಾರೆಸ್ಟ್” ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ‌‌.

‘ಡಬಲ್ ಇಂಜಿನ್’ , ‘ಬ್ರಹ್ಮಚಾರಿ’ ಚಿತ್ರಗಳ ನಿರ್ದೇಶಕ ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕರು ಈ ಚಿತ್ರದ ಮೂಲಕ ವಿಭಿನ್ನವಾಗಿ ಹೇಳಹೊರಟಿದ್ದಾರೆ.

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.

ಹಾಡು ಹಾಗೂ ಟೀಸರ್ ಮೂಲಕ ಈಗಾಗಲೇ ಜನರ ಮನ ಮುಟ್ಟಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಸಂಪಾಜೆ ಫಾರೆಸ್ಟ್ ಹಾಗೂ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತ ೮೦ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆದಿದೆ. ಬಹುತೇಕ ಚಿತ್ರೀಕರಣ ಕಾಡಿನಲ್ಲೇ ನಡೆದಿರುವುದು ವಿಶೇಷ.

ಬಹು ತಾರಾಗಣವುಳ್ಳ ಈ ಚಿತ್ರದ ಕ್ಲೈಮ್ಯಾಕ್ಸ್ ಅದ್ದೂರಿಯಾಗಿ ಮೂಡಿಬಂದಿದ್ದು, ವಿ ಎಫ್ ಎಕ್ಸ್ ಅನ್ನು ನವೀನವಾಗಿ ಬಳಸಿಕೊಳ್ಳಲಾಗಿದೆ.

Tags: BrahmachariChandramohancinema is N.M.K.movie-forestNM Kantarajregional censor boardthe director of 'Double.
Previous Post

ವಿಜಯೇಂದ್ರ ವಿರುದ್ಧ ಗಣಿಗ ರವಿ ವಾಗ್ದಾಳಿ

Next Post

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada