• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಶಾಲನಗರದಲ್ಲಿ ಕೊಡವ ಮಹಿಳೆಗೆ ಮುಸ್ಲಿಂ ಗುಂಪಿನಿಂದ ವಕ್ಫ್‌ ಆಸ್ತಿ ಅತಿಕ್ರಮಿಸಿದ್ದೀರ ;ಮನೆ ಖಾಲಿ ಮಾಡುವಂತೆ ಬೆದರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ ;ಮುಸ್ಲಿಮರ ಗುಂಪೊಂದು ಕೊಡವ ಮಹಿಳೆಯೊಬ್ಬರ ಮನೆಯ ಆವರಣಕ್ಕೆ ಪ್ರವೇಶಿಸಿ ನೀವು ವಕ್ಫ್‌ ಆಸ್ತಿಯನ್ನು ಅತಿಕ್ರಮಿಸಿಕೊಂಡು ಮನೆ ಕಟ್ಟಿದೀರ , ತೆರವುಗೊಳಿಸಿ ಎಂದು ಬೆದರಿಕೆ ಒಡ್ಡಿದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಈ ಕುರಿತು ಕೊಡಗು ಜಿಲ್ಲಾ ಪೋಲೀಸ್‌ ಅಧಿಕಾರಿಯವರಿಗೆ ದೂರು ನೀಡಿರುವ ಪುಚ್ಚಿಮಾಡ ರೇಣುಕಾ ಉತ್ತಪ್ಪ ಅವರು ತಾವು ತಮ್ಮ ಕುಶಾಲನಗರದ ಮುಳ್ಳುಸೋಗೆ ಯಲ್ಲಿ ಮನೆಯಲ್ಲಿ ಒಬ್ಬರೇ ಇರುವಾಗ ಈರ್ವರು ಮುಸ್ಲಿಮರು ಬಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದು ದೂರಿನ ಸಾರಾಂಶ ಈ ಕೆಳಗಿನಂತಿದೆ.

ADVERTISEMENT

ತಾವು ಬೆಂಗಳೂರಿನಲ್ಲಿ ಖಾಸಗೀ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು ಮುಳ್ಳುಸೋಗೆಯಲ್ಲಿ ಪಿತ್ರಾರ್ಜಿತ ಮನೆ ಹೊಂದಿದ್ದಾರೆ. ದಿನಾಂಕ 25.10.2024 ರಂದು ಬೆಳಿಗ್ಗೆ 11 ಗಂಟೆಗೆ, ತಾವೊಬ್ಬರೇ ಮನೆಯಲ್ಲಿ ಇರುವಾಗ ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ವ್ಯಕ್ತಿಗಳು ಮನೆಯ ಆವರಣಕ್ಕೆ ಪ್ರವೇಶಿಸಿ ಇದು ವಕ್ಫ್‌ ಆಸ್ತಿ ಆಗಿದ್ದು ಮನೆಯನ್ನು ತಕ್ಷಣವೇ ತೆರವುಗೊಳಿಸಿ ವಕ್ಫ್‌ ಗೆ ಒಪ್ಪಿಸುವಂತೆ ಬೆದರಿಸಿದರು. ಆಗ ನಾನು ನನ್ನ ತಂದೆ 1984 ರಲ್ಲಿ ಮುಳ್ಳುಸೋಗೆ ಯಲ್ಲಿ ಸರ್ವೆ ನಂಬರ್‌ 79/2 ರಲ್ಲಿ 36 ಸೆಂಟ್ಸ್ ಜಮೀನನ್ನು ಮಾನ್ಯಪಂಡ ಬೋಪಣ್ಣ ಎಂಬುವವರಿಂದ ಖರೀದಿಸಿದ್ದು.

ಅಂದಿನಿಂದ ನಾವು ಹೇಳಿದ ಆಸ್ತಿಯಲ್ಲಿ ವಾಸಿಸುತ್ತಿದ್ದೇವೆ, ಇತ್ತೀಚೆಗೆ ನನ್ನ ಪೋಷಕರು ನಿಧನರಾದರು, ನಾನು ಹೇಳಿದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದೇನೆ. ಏಕೆ ತೆರವುಗೊಳಿಸಬೇಕು ? ನಿಮ್ಮ ಬಳಿ ಯಾವುದಾದರೂ ನ್ಯಾಯಾಲಯದ ನೋಟೀಸ್‌ ಅಥವಾ ವಕ್ಫ್‌ ಗೆ ಸೇರಿರುವುದಕ್ಕೆ ದಾಖಲೆ ಕೊಡಿ ಎಂದು ಪ್ರಶ್ನಿಸಿದೆ.

ಆಗ ಅವರು ನೀವು ಮನೆ ಖಾಲಿ ಮಾಡದಿದ್ದರೆ ಹೊರಗೆ 15 ಜನರು ಇದ್ದಾರೆ ಅವರನ್ನು ಕರೆಯುವುದಾಗಿಯೂ ಮತ್ತು ಹೆಚ್ಚಿನ ಜನರನ್ನು ಕರೆತರುವುದಾಗಿಯೂ ಬೆದರಿಸಿದರು ಎಂದು ತಿಳಿಸಿದ್ದಾರೆ. ಆಗ ಮಹಿಳೆಯು ಕೂಡಲೇ ಮನೆಯ ಆವರಣದಿಂದ ಹೊರ ಹೋಗುವಂತೆ ಗದರಿಸಿದ್ದಾರೆ. ಆಗ ಅವರು ನಮಗೆ ಷರಿಯಾ ಕೋರ್ಟ್‌ ಇದೆ ನೀವು ಬೆಂಗಳೂರಿನ ಷರಿಯಾ ಕೋರ್ಟಿಗೆ ಬರಬೇಕಾಗುತ್ತದೆ ಅಲ್ಲಿ ನಿಮ್ಮ ಮಾಲೀಕತ್ವ ಸಾಬೀತುಪಡಿಸಬೇಕು ಎಂದು ಬೆದರಿಸಿ ಸ್ಥಳದಿಂದ ತೆರಳಿದ್ದಾರೆ ಎಂದು ಆರೋಪಿಸಿದ್ದಾರೆ.ಅಲ್ಲದೆ ಕೊಡವ ಸಮಾಜದ ಒಕ್ಕೂಟ ಗಳ ಅದ್ಯಕ್ಷರಿಗೂ ಸೂಕ್ತ ನೆರವು ನೀಡುವಂತೆ ಕೋರಿ ದೂರು ಸಲ್ಲಿಸಿದ್ದಾರೆ.

ಈ ಕುರಿತು ಕುಶಾಲನಗರ ಪೋಲೀಸರು ತನಿಖೆ ನಡೆಸುತಿದ್ದು ಸೋಮವಾರ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ವರದಿ – ಕೋವರ್‌ ಕೊಲ್ಲಿ ಇಂದ್ರೇಶ್‌

Tags: KushalanagarMadikeriMuslim groupPuccimada Renuka Uthappasurvey number 79/2 in Mullusoge in 1984.Threatened to vacate the houseWaqf propert.
Previous Post

ದೇವೇಗೌಡರಿಗೆ ಒಮ್ಮೊಮ್ಮೆ ಜಾಣ ಕಿವುಡು:ಯೋಗೇಶ್ವರ್​​ ಕಟು ಟೀಕೆ

Next Post

ಟೆಲಿಕಾಂ ಇಲಾಖೆ ಮತ್ತು ರೂರ್ಕಿ ಐಐಟಿ ಯಿಂದ ಗ್ರಾಮೀಣ 5 ಜಿ ಸಂಪರ್ಕ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ಟೆಲಿಕಾಂ ಇಲಾಖೆ ಮತ್ತು ರೂರ್ಕಿ ಐಐಟಿ ಯಿಂದ ಗ್ರಾಮೀಣ 5 ಜಿ ಸಂಪರ್ಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada