ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Bollywood actor Salman khan) ಮೇಲಿಂದ ಮೇಲೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ (Karnataka) ಸಲ್ಲು ಗೆ ಜೀವ ಬೆದರಿಕೆ ಹಾಕಲಾಗಿದೆ. ನಟ ಸಲ್ಮಾನ್ ಖಾನ್ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿ ಬಿಕಾರಾಮ್ನನ್ನು ಹಾವೇರಿ (Haveri) ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ರಾಜಸ್ಥಾನದ (Rajastan) ಮೂಲದ ಬಿಕಾರಾಮ್ ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದ ಎನ್ನಲಾಗಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಹಾರಾಷ್ಟ್ರದ ಪೊಲೀಸರ (Maharashtra police) ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿ, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದೇವೆ ಎಂದು ಹಾವೇರಿ ಪೊಲೀಸರು ತಿಳಿಸಿದ್ದಾರೆ.