• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಬಿರುಸಿನ ಪ್ರಚಾರ

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ವೈನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಬಿರುಸಿನ ಪ್ರಚಾರ
Share on WhatsAppShare on FacebookShare on Telegram

ವಯನಾಡ್‌; ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕನ್ನಡಿಗ ಮತದಾರರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ವಿಶೇಷವಾಗಿ ಅಲ್ಲಿನ ಕೆಲವು ಬುಡಕಟ್ಟು ಸಮುದಾಯಗಳಲ್ಲಿ ಕನ್ನಡಿಗರನ್ನು ಕಾಣಬಹುದಾಗಿದೆ. ಅವರನ್ನು ಪಕ್ಷದ ಕಡೆ ಸೆಳೆಯಲು ಕಾಂಗ್ರೆಸ್ ಕರ್ನಾಟಕದಿಂದ ಕಾಂಗ್ರೆಸ್ ಹಲವಾರು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರನ್ನು ನಿಯೋಜಿಸಿದೆ. ಆ ಪೈಕಿ ಮುಂಚೂಣಿಯಲ್ಲಿ ಇರುವವರೆಂದರೆ ಇಂಧನ ಸಚಿವ ಜಾರ್ಜ್. ವಯನಾಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಗೆಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಟೊಂಕ ಕಟ್ಟಿ ನಿಂತಿದ್ದಾರೆ.

ADVERTISEMENT

ಪ್ರಿಯಾಂಕಾ ಗಾಂಧಿ ವಾದ್ರಾ ಅವರದು ಇದು ಮೊದಲ ಚುನಾವಣೆ. ಜೊತೆಗೆ ಅವರು ಸ್ಪರ್ಧಿಸುತ್ತಿರುವ ಕ್ಷೇತ್ರ ಸಹೋದರ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಜೊತೆಗೆ ಗಾಂಧಿ ಕುಟುಂಬ ದಕ್ಷಿಣದಲ್ಲಿ ನೆಲೆಯೂರಲು ಅನುಕೂಲವಾಗುವಂತಹ ಚುನಾವಣೆ ಇದು. ಈ ಹಿನ್ನೆಲೆಯಲ್ಲಿ ಅತ್ಯಂತ ನಿರ್ಣಾಯಕವಾಗಿರುವ ವಯನಾಡ್ ಉಪ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದ್ದು ಅಲ್ಲಿನ ಕನ್ನಡಿಗರ ಮತ ಸೆಳೆಯಲು ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಯೋಜನೆ ರೂಪಿಸಿದೆ.

ದಶಕಗಳ ಕಾಲದಿಂದ ಕರ್ನಾಟಕದಲ್ಲೇ ಇದ್ದರೂ ಕೇರಳ ಮೂಲದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಯನಾಡಿನಲ್ಲಿ ಗಣನೀಯ ಪ್ರಭಾವ ಹೊಂದಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಸಂಪರ್ಕ ಹೊಂದಿರುವ ಜಾರ್ಜ್ ಮಲಯಾಳಿ ಭಾಷಿಕರ ಮೇಲೂ ಪ್ರಭಾವ ಬೀರಬಲ್ಲಂತಹ ನಾಯಕರು. ಆದುದರಿಂದ ಕೆ.ಜೆ. ಜಾರ್ಜ್ ಅವರು ವಯನಾಡ್ ಉಪಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಪಾತ್ರವಹಿಸುತ್ತಿದ್ದಾರೆ.

ಕೆ.ಜೆ. ಜಾರ್ಜ್‌ ಅವರು ತೊಟ್ಟುಮುಳಿ, ತಿರುವಂಬಾಡಿ, ಪಲ್ಲಟ್ಟು, ಅನಕ್ಕಂಪೊಯಿಲ್ ಮತ್ತು ಪುತ್ತುಪ್ಪಾಡಿ ಪಟ್ಟಣಗಳಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಗೆಲುವಿಗಾಗಿ ಶ್ರಮಿಸುವಂತೆ ಉತ್ತೇಜಿಸಿದರು.

ಮೈಸೂರು ಮೂಲದ ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳದ ಕಾರ್ಯಾಚರಣೆಯ ಉಸ್ತುವಾರಿ ಎಸ್. ಪ್ಯಾರಿ ಜಾನ್ ಅವರು ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ಗೆಲುವಿಗಾಗಿ ಸೇವಾದಳದ ಅಭಿಯಾನವನ್ನು ಮುನ್ನಡೆಸುತ್ತಿದ್ದಾರೆ. ಪ್ರಸ್ತುತ ವಯನಾಡ್‌ನಲ್ಲಿ ನೆಲೆಸಿರುವ ಜಾನ್‌ ಕಾಂಗ್ರೆಸ್ ಪಕ್ಷದ ಸ್ಥಳೀಯ ಕಾರ್ಯಕರ್ತರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. “ನಾವು ಕ್ಷೇತ್ರದಲ್ಲಿ ಮೂಲೆ ಮೂಲೆಗಳಲ್ಲಿ ಸಭೆಗಳನ್ನು ನಡೆಸಿ ಭಾಷೆಯ ತಡೆಗೋಡೆಯ ಹೊರತಾಗಿಯೂ ಪ್ರಿಯಾಂಕಾ ಗಾಂಧಿ ಅವರ ಗೆಲುವಿಗೆ ಶ್ರಮಿಸುತ್ತಿದ್ದೇವೆ” ಎಂದು ಜಾನ್ ಹೇಳಿದರು.

ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆಯ ಶಾಸಕ ಮತ್ತು ಪ್ರಭಾವಿ ಬುಡಕಟ್ಟು ನಾಯಕ ಅನಿಲ್ ಚಿಕ್ಕಮಾದು ಅವರು ಕೂಡ ವಯನಾಡು ಉಪಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಬುಡಕಟ್ಟು ಮತದಾರರ ಜೊತೆಗಿನ ಬಾಂಧವ್ಯಕ್ಕೆ ಹೆಸರುವಾಸಿಯಾಗಿರುವ ಚಿಕ್ಕಮಾದು ಅವರ ಬೆಂಬಲವನ್ನು ಎಚ್‌ಡಿ ಕೋಟೆ-ವಯನಾಡು ಗಡಿಯಲ್ಲಿ ಬುಡಕಟ್ಟು ಜನಾಂಗದ ಮತವನ್ನು ಭದ್ರಪಡಿಸಿಕೊಳ್ಳಲು ಅತ್ಯಗತ್ಯವೆಂದು ಪರಿಗಣಿಸಲಾಗಿದೆ. ಇವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಕೂಡ ಸೇರ್ಪಡೆಯಾಗಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಹಲವು ಕಾಂಗ್ರೆಸ್ ನಾಯಕರು ಸಹ ಕ್ಷೇತ್ರದ ಕನ್ನಡಿಗರೊಂದಿಗೆ ಸಾಂಸ್ಕೃತಿಕ ಮತ್ತು ಭಾಷಿಕ ಬಾಂಧವ್ಯದಿಂದ ವಯನಾಡಿಗೆ ಪ್ರಯಾಣಿಸಿದ್ದಾರೆ. “ವಯನಾಡಿನಲ್ಲಿರುವ ಕನ್ನಡ ಮಾತನಾಡುವ ಸಮುದಾಯವು ಮತದಾರರಲ್ಲಿ ಗಣನೀಯ ಭಾಗವಾಗಿದೆ ಮತ್ತು ಅವರ ಅನನ್ಯ ಅಗತ್ಯತೆಗಳು ಮತ್ತು ಕಾಳಜಿಗಳನ್ನು ಅರ್ಥಮಾಡಿಕೊಳ್ಳುವ ನಾಯಕರನ್ನು ಕರೆತರುವ ಮೂಲಕ ನಾವು ಅವರೊಂದಿಗೆ ವಿಶ್ವಾಸವನ್ನು ಬೆಳೆಸುವ ಗುರಿಯನ್ನು ಹೊಂದಿದ್ದೇವೆ” ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.

ವಯನಾಡಿನಲ್ಲಿ ಬೆಂಬಲ ಸಂಗ್ರಹಿಸಲು ಕಾಂಗ್ರೆಸ್ ಕರ್ನಾಟಕ ಮೂಲದ ನಾಯಕರನ್ನು ನಿಯೋಜಿಸಿದ್ದರೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಅವರು ಕರ್ನಾಟಕ ಬಿಜೆಪಿ ಘಟಕವು ರಾಜ್ಯ ಉಪಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ, ಕರ್ನಾಟಕ ಮೂಲದ ಬಿಜೆಪಿ ನಾಯಕರು ವಯನಾಡಿನಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

Previous Post

ಹುಲ್ಲು ಸುಟ್ಟರೆ ಮೂರು ಲಕ್ಷ ರೂಪಾಯಿ ದಂಡ ಎಂದು ಬೆದರಿಸಿದ ಕೃಷಿ ಅಧಿಕಾರಿ ; ರೈತ ಸಾವು

Next Post

ಏಯ್‌ ಕರಿಯಾ ಕುಮಾರಸ್ವಾಮಿ.. ನಿನ್ನ ರೇಟ್‌ ಹೇಳು.. ಖರೀದಿ ಮಾಡ್ತೀನಿ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ಏಯ್‌ ಕರಿಯಾ ಕುಮಾರಸ್ವಾಮಿ.. ನಿನ್ನ ರೇಟ್‌ ಹೇಳು.. ಖರೀದಿ ಮಾಡ್ತೀನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada