ಇ ಖಾತಾ ಪ್ರಕ್ರಿಯೆಯನ್ನು ಸುಧಾರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡು, ಪ್ರಮುಖ ಸಭೆ ನಡೆಸಿದ ನಂತರ ಈ ಬಗ್ಗೆ ಕಂದಾಯ ಇಲಾಖೆ ಸಚಿವ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಪ್ರಕಾರವಾಗಿ, ಬಿಬಿಎಂಪಿಯೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸೋಲಾಗಿದ್ದು,ಇ ಖಾತ ಪ್ರಕ್ರಿಯೆಯನ್ನು ಸುಧಾರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.
1. ಎಲ್ಲಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ ಖಾತಾ ಸೌಲಭ್ಯವನ್ನು ಲಭ್ಯಗೊಳಿಸಲಾಗಿದೆ.
2. 11 ಸಮರ್ಪಿತ BBMP ಸಿಬ್ಬಂದಿಯನ್ನು ತಕ್ಷಣದ ವಹಿವಾಟು/ನೋಂದಣಿಗಾಗಿ ಇ ಖಾತಾ ಅಗತ್ಯವಿರುವವರಿಗೆ ಸಹಾಯ ಮಾಡಲು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ. (ಪಟ್ಟಿ ಲಗತ್ತಿಸಲಾಗಿದೆ)
3. ಕನ್ನಡ ಮತ್ತು ಇಂಗ್ಲಿಷ್ ವೀಡಿಯೋ ಇ ಖಾತಾ ಪಡೆಯುವಲ್ಲಿ ಲಭ್ಯವಾಗಿದೆ.
ಇಂಗ್ಲೀಷ್ –
youtu.be/GL8CWsdn3wo?si…
ಕನ್ನಡ –
youtu.be/JR3BxET46posi=…
4. ಕರಡು E ಖಾತಾದಲ್ಲಿನ ದೋಷಗಳಿಗಾಗಿ ತಿದ್ದುಪಡಿಗಳನ್ನು ಅನುಮತಿಸಲಾಗಿದೆ.
5. ಅಪಾರ್ಟ್‌ಮೆಂಟ್‌ಗಳು, ಪಾರ್ಕ್‌ಗಳು, ಸಿಎ ಸೈಟ್‌ಗಳು, ಹೊಸ ಲೇಔಟ್‌ಗಳಲ್ಲಿನ ರಸ್ತೆಗಳು ಇತ್ಯಾದಿಗಳಿಗೆ ಮೊದಲ ಬಾರಿಗೆ ಖಾತಾವನ್ನು ಒದಗಿಸುವ ಪರಿಹಾರಗಳು.
6. ಇನ್ನೂ ಕೆಲವು ನಿರ್ದಿಷ್ಟ ಸಮಸ್ಯೆಗಳಿಗೆ ಪರಿಹಾರಗಳು.
ಎಂದು ಸುದೀರ್ಘವಾಗಿ ಪೋಸ್ಟ್ ಮಾಡಿರುವ ಕಂದಾಯ ಸಚಿವರು, ಸುಧಾರಿತ ಇ ಖಾತ ಕಿರುತ ಸುಧಾರಿತ ಕ್ರಮಗಳನ್ನು ಜನರ ಗಮನಕ್ಕೆ ತಂದಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಇದನ್ನು ಇನ್ನೂ ಸರಳೀಕೃತಗೊಳಿಸುವಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.