
ಬೀದರ್: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ನಲ್ಲಿ ನಡೆದಿದೆ.

ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ಶಾಲೆಯಲ್ಲಿ ಈ ಘಟನೆ ನಡೆದಿದೆ.ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









