• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ:ಶರಣ ಪ್ರಕಾಶ್ ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು,: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು ಹಾಗೂ ಉಚಿತ ಔಷಧವನ್ನು ವಿತರಿಸುವ ಮೂಲಕ ಸಮಾಜ ಸುರಕ್ಷತೆಗೆ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್* ಅವರು ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಆಯೋಜಿಸಿದ್ದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವವರಿಗೆ ಉಚಿತ ಔಷಧ ನೀಡುವ ವಿಶೇಷ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಸಚಿವರು ಮಾತನಾಡಿದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಂಥ ಅಪರೂಪದ ಹಾಗೂ ಭಾರಿ ಅಪಾಯ ತಂದೊಡ್ಡುವ ರೋಗಗಳನ್ನು ನಿಯಂತ್ರಿಸುವುದಕ್ಕೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಈ ರೀತಿಯ ಚಿಕಿತ್ಸಾ ವ್ಯವಸ್ಥೆಗಳು ಅಗಾಧವಾದ ಪ್ರಭಾವವನ್ನು ಬೀರುತ್ತವೆ. ಪ್ರಸವಪೂರ್ವ ರೋಗನಿರ್ಣಯ, ಆರಂಭಿಕ ರೋಗನಿರ್ಣಯಕ್ಕೆ ನಾವು ಈಗ ಹೆಚ್ಚು ಗಮನಹರಿಸಬೇಕಾಗಿದೆ.ಚಿಕಿತ್ಸೆ, ಮತ್ತು ಸಮಗ್ರ ಬೆಂಬಲ ವ್ಯವಸ್ಥೆಗಳು ಭರವಸೆಯನ್ನು ನೀಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಶಿಶುಗಳಲ್ಲಿ ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಅಪರೂಪದ ಅನುವಂಶಿಕ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡುವುದು ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಅಪರೂಪದ ಕಾಯಿಲೆಗಳ ರೋಗಿಗಳಿಗೆ ಸರ್ಕಾರ ಸದಾ ಬೆಂಬಲ ನೀಡುತ್ತಿದೆ, ಹೆಚ್ಚುವರಿಯಾಗಿ ಒಟ್ಟು ಸುಮಾರು 75 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅಪರೂಪದ ಕಾಯಿಲೆಗಳ ಚಿಕಿತ್ಸೆಗಾಗಿ ವಿಶೇಷ ನಿಧಿಯನ್ನು ಆರಂಭಿಸಲಾಗಿದೆ. ಅಪರೂಪದ ಕಾಯಿಲೆಗಳಿಗಾಗಿ ಶ್ರೇಷ್ಠತೆಯ ಕೇಂದ್ರವನ್ನು ಸ್ಥಾಪಿಸಿದ್ದೇವೆ (COERD). ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಇದು ಆರಂಭಿಸಲಾಗಿದ್ದು, ಇದು ದೇಶದ ಮೊದಲ ಕೇಂದ್ರವಾಗಿದೆ ಎಂದು ಪಾಟೀಲರು ವಿವರಿಸಿದರು.

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಪಾಲುದಾರಿಕೆಯಲ್ಲಿ ಉಚಿತ ಚಿಕಿತ್ಸೆ ಒದಗಿಸಲು ಹೆಚ್ಚು ಆದ್ಯತೆ ನೀಡಲಾಗಿದೆ.ಅದರಲ್ಲೂ ಪ್ರಮುಖವಾಗಿ ಬೆನ್ನುಮೂಳೆ ಸ್ನಾಯು ಕ್ಷೀಣತೆಗೆ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿಯೇ ಇದೊಂದು ಮೈಲಿಗಲ್ಲಾಗಿದೆ ಎಂದು ಸಚಿವರು ತಿಳಿಸಿದರು.

ನಮ್ಮ ಸರ್ಕಾರ ಸರ್ವರ ಆರೋಗ್ಯ ರಕ್ಷಣೆಗೆ ಸದಾ ಬದ್ಧವಾಗಿದೆ.ಈಗಾಗಲೇ ಗ್ಯಾರಂಟಿ ಯೋಜನೆಗಳ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿಯೂ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸ್ವಸ್ಥ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಭವಿಷ್ಯದಲ್ಲಿಯೂ ಹಲವು ಯೋಜನೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ಮತ್ತು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ಸಂಜಯ್ ಉಪಸ್ಥಿತರಿದ್ದರು.

Tags: BangaloreCongress Partyessential treatment for rare diseasesGovernment committed to providingIndira Gandhi Children's HealthMinister Dr. Sharan Prakash Patil
Previous Post

ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ..!‌

Next Post

ಜಾತಿ ಧರ್ಮದ ಜಂಜಾಟದಲ್ಲಿ ನಿನ್ನ ಬಾಳು ಕತ್ತಲು”

Related Posts

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
0

 ನಾ ದಿವಾಕರ ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅದರ ಅಂತರ್‌ ಗರ್ಭದಲ್ಲಿ ಅಡಗಿದ್ದ ತಾರತಮ್ಯ, ದೌರ್ಜನ್ಯ, ಅಸಮಾನತೆ ಮತ್ತು ಕ್ರೌರ್ಯವನ್ನು ಅಧ್ಯಯನ ಸಂಶೋಧನೆಗಳ ಮೂಲಕ ಮಾತ್ರವಲ್ಲದೆ...

Read moreDetails

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Next Post

ಜಾತಿ ಧರ್ಮದ ಜಂಜಾಟದಲ್ಲಿ ನಿನ್ನ ಬಾಳು ಕತ್ತಲು"

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada