• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ:ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ದೇಶದಲ್ಲಿ ಎಲ್ಲಾ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿಗೆ ಅರ್ಥವಾಗಿರುವ ಕಾರಣಕ್ಕೆ ಅವರೂ ಸಹ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದು, ಕರ್ನಾಟಕ ಮಾದರಿಯನ್ನು ಹಿಂಬಾಲಿಸುತ್ತಿದ್ದಾರೆ.ಅದಕ್ಕೆ ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ 1,500 ರೂಪಾಯಿ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿನಗರದ ನಿವಾಸದ ಬಳಿ ಮಧ್ಯಮಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

“ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಚುನಾವಣೆಯಲ್ಲಿ ಗೆದ್ದರೆ ಮಹಿಳೆಯರಿಗೆ ₹ 2,100 ಕೊಡುವುದಾಗಿ ಹೇಳಿದೆ. ನಾವು ₹ 3,000, ಯುವಕರಿಗೆ ₹ 4,000 ಹಾಗೂ 25 ಸಾವಿರ ಮೊತ್ತದ ಜೀವವಿಮೆ ನೀಡುವುದಾಗಿ ಭರವಸೆ ನೀಡಿದ್ದೇವೆ” ಎಂದರು.ಇದೇ ವೇಳೆ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಪತ್ರಿಕೆಗಳಲ್ಲಿ ನೀಡಿರುವ ಜಾಹಿರಾತನ್ನು ಪ್ರದರ್ಶಿಸಿದರು.

ಮಹಾರಾಷ್ಟ್ರದಲ್ಲಿ 160 ಸ್ಥಾನ:”ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿಯೇ ಇಲ್ಲ ಎಂದು ಸುಳ್ಳು ಪ್ರಚಾರ ಮಾಡಿದ್ದರು. ಅದಕ್ಕೆ ನಾವು ಅಲ್ಲಿನ ಆಡಳಿತರೂಡ ಪಕ್ಷಗಳಿಗೆ ಕರ್ನಾಟಕಕ್ಕೆ ಭೇಟಿ ನೀಡುವಂತೆ ಸವಾಲು ಹಾಕಿದ್ದೆವು. ಅಲ್ಲದೇ, ವಿಶೇಷ ಬಸ್ ಹಾಗೂ ವಿಮಾನ ಕಾಯ್ದಿರಿಸುವುದಾಗಿ ಹೇಳಿದ್ದೆವು. ನಮ್ಮ ಪಕ್ಷದ ಆಂತರಿಕ ಸಮೀಕ್ಷೆ ಪ್ರಕಾರ 160 ಸ್ಥಾನಗಳನ್ನು ಗೆಲ್ಲುವ ವರದಿಯಿದೆ. ಶುಕ್ರವಾರ ಪ್ರಚಾರ ಮಾಡಿದ್ದು, ಶನಿವಾರ ಹಾಗೂ ಭಾನುವಾರ ಪ್ರಚಾರದಲ್ಲಿ ಭಾಗವಹಿಸುವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಬಿಜೆಪಿ ಪ್ರಯತ್ನ:

ವಕ್ಫ್ ಭೂಮಿ ವಿಚಾರವಾಗಿ ರಾಜ್ಯದಲ್ಲಿ ಬಿಜೆಪಿ ಅಭಿಯಾನದ ಬಗ್ಗೆ ಕೇಳಿದಾಗ “ಇದು ಬಿಜೆಪಿಯ ಮೂರ್ಖತನ. ರೈತರ ಪಹಣಿಗಳಲ್ಲಿ ವಕ್ಫ್ ಎಂದು ಬಿಜೆಪಿ ಕಾಲದಲ್ಲಿ ನಮೂದಾಗಲು ಪ್ರಾರಂಭವಾಯಿತು. ನಮ್ಮವರು ಇದನ್ನು ತಡವಾಗಿ ಗಮನಿಸಿದರು. ಈ ಬಗ್ಗೆ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ. ಚುನಾವಣೆಗಳು ಇದ್ದಿದ್ದರಿಂದ ಇವುಗಳನ್ನು ಬಹಿರಂಗಪಡಿಸಲು ಆಗಿಲ್ಲ. ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮಾಧ್ಯಮಗಳು ಬಿಜೆಪಿ ಹೇಳಿಕೆಯನ್ನು ಮಾತ್ರ ಬಿತ್ತರಿಸುತ್ತಿವೆ:

“ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ನವರು ಮಾತನಾಡಿದರೆ ಮಾಧ್ಯಮಗಳು ಬಿತ್ತರಿಸುತ್ತಿಲ್ಲ. ಕೇವಲ ಬಿಜೆಪಿಯವರ ಆರೋಪಗಳನ್ನು ಮಾತ್ರ ನೀವು ತೋರಿಸುತ್ತಿದ್ದೀರಿ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ವಕ್ಫ್ ವಿಚಾರದಲ್ಲಿ ಬಿಜೆಪಿಯ ಎಲ್ಲಾ ಕೈವಾಡವನ್ನು ನಾವು ಬಹಿರಂಗಪಡಿಸುತ್ತೇವೆ” ಎಂದರು.

ಯತ್ನಾಳ್ ಆರೋಪಕ್ಕಿಂತ ಬೇರೆ ಸಾಕ್ಷಿ ಬೇಕೆ?

ಬಿಜೆಪಿ ವಕ್ಫ್ ಅಭಿಯಾನದಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ಅವರ ಎರಡು ಬಣಗಳಾಗಿರುವ ಬಗ್ಗೆ ಕೇಳಿದಾಗ, “ಅವರ ಎರಡು ಬಣಗಳ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ಆಮಿಷದ ಬಗ್ಗೆ ಹೇಳಿದರು. ಇದೇ ಯತ್ನಾಳ್ ಅವರು ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ?” ಎಂದರು.

ಶಾಸಕರು ಕುರಿಗಳಲ್ಲವೇ?

“ಶಾಸಕರ ಖರೀದಿ ಬಗ್ಗೆ ತನಿಖೆ ಮಾಡಿ. ಖರೀದಿ ಮಾಡಲು ಶಾಸಕರು ಕುರಿಗಳೇ ಎಂದು ಬಿಜೆಪಿಯವರು ಕೇಳಿದ್ದಾರೆ. ಹಾಗಾದರೆ ಈ ಹಿಂದೆ ಖರೀದಿ ಮಾಡಿದ್ದ ಶಾಸಕರು ಕುರಿಗಳಲ್ಲವೇ? ಬಿಜೆಪಿಯವರು ಕುರಿಗಳನ್ನೇ ಖರೀದಿ ಮಾಡಿದ್ದು. ದನ ಕುರಿಗಳನ್ನು ಖರೀದಿ ಮಾಡಿದಂತೆ ಶಾಸಕರನ್ನು ಖರೀದಿ ಮಾಡಿದ್ದಿರಲ್ಲವೇ ಎಂದು ಈ ಹಿಂದೆಯೂ ಪ್ರಶ್ನಿಸಿದ್ದೆವು. ಸಿ.ಪಿ.ಯೋಗೇಶ್ವರ್ ಅವರು ಅಶ್ವತ್ ನಾರಾಯಣ್ ಜೊತೆಗೂಡಿ ಶ್ರೀನಿವಾಸ್ ಗೌಡರ ಮನೆಗೆ ಹೋಗಿ ಹಣವಿಟ್ಟು ಬಂದೇ ಎಂದು ಸದನದಲ್ಲಿಯೇ ಹೇಳಿಲ್ಲವೇ” ಎಂದು ಹರಿಹಾಯ್ದರು.

1 ಸಾವಿರ ಕೋಟಿಯ ಬಗ್ಗೆ ಸಾಕ್ಷಿ ಕೊಡಿ.

ಆಪರೇಷನ್ ಕಮಲದ ಬಗ್ಗೆ ಸಾಕ್ಷಿ ಕೊಡಿ ಎನ್ನುವ ಆರ್.ಅಶೋಕ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ, “₹1 ಸಾವಿರ ಕೋಟಿ ಎಲ್ಲಿಂದ ಬಂತು ಎಂದು ಹೇಳಿರುವ ಯತ್ನಾಳ್ ಅವರು ಸಾಕ್ಷಿ ಕೊಡಬೇಕು. ಇಷ್ಟೊಂದು ಹಣವನ್ನು ಸಂಗ್ರಹ ಮಾಡಿದವರು ಯಾರು? ಇದರ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದು, ಅಲ್ಲಿಗೆ ತೆರಳಿ ಈ ಹೇಳಿಕೆಯನ್ನು ನೀಡಿದವರು ಯಾರು ಎಂದು ಆರ್. ಅಶೋಕ್ ಅವರು ತಿಳಿಸಬೇಕು” ಎಂದರು.

ಯತ್ನಾಳ್ ಅವರು ದಡ್ಡರೇ?:”ಈ ಹಿಂದೆ ಆಡಳಿತದಲ್ಲಿ ಇದ್ದಾಗ ಬಿಜೆಪಿಯವರು ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ನೀಡಿದ್ದರು ಎಂದು ಈ ಹಿಂದೆ ಯತ್ನಾಳ್ ಅವರು ಆರೋಪ ಮಾಡಿದ್ದರು. ಈಗ ವಿರೋಧ ಪಕ್ಷದ ಸದಸ್ಯರಾಗಿದ್ದಾಗಲೂ ಇದೇ ಆರೋಪ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮಾಜಿ ಸಚಿವರಾಗಿದ್ದವರು, ಈ ರೀತಿಯ ಹೇಳಿಕೆಯನ್ನು ನೀಡಲು ಯತ್ನಾಳ್ ಅವರು ದಡ್ಡರೇ?” ಎಂದರು.

ಆಪರೇಷನ್ ಮೊದಲು ಅಲ್ಲಿಂದ ಪ್ರಾರಂಭವಾಗಲಿ:ಆಪರೇಷನ್ ಕಮಲದ ಬೆನ್ನಲ್ಲೇ, ಆಪರೇಷನ್ ಹಸ್ತ ನಡೆಯುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪದ ಬಗ್ಗೆ ಕೇಳಿದಾಗ, “₹1 ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ ಎಂದು ಹೇಳಿದ್ದು ಬಿಜೆಪಿಯವರು. ಆಪರೇಷನ್ ಮೊದಲು ಅಲ್ಲಿಂದ ಪ್ರಾರಂಭವಾಗಲಿ. ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಮತ್ತೆ ಸಮರ್ಥಿಸುತ್ತೇನೆ” ಎಂದರು.

ಕೊರೋನಾ ಹಗರಣದ ಹಣ ವಸೂಲಿ ಬಗ್ಗೆ ಚರ್ಚೆ:

ರಾಜ್ಯದ ಕೊರೊನಾ ಹಗರಣಗಳ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಲಾಗುವುದು ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, ಮೈಕಲ್ ಕುನ್ಹ ಅವರು ಕೊರೋನಾ ಹಗರಣಗಳ ಬಗ್ಗೆ ಮಾಡಿರುವ ತನಿಖೆಯ ವರದಿ ನಮಗೆ ಬಂದಿದೆ.ಇದರ ಬಗ್ಗೆ ಒಂದು ಸಭೆ ನಡೆಸಲಾಗಿದೆ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ.ಕುನ್ಹ ಅವರು ಹಗರಣದ ಹಣವನ್ನು ವಸೂಲಿ ಮಾಡಿ ಎಂದು ಹೇಳಿದ್ದಾರೆ.ಈ ರೀತಿ ಮಾಡಲು ಒಂದಷ್ಟು ನೀತಿ ನಿಯಮಗಳಿರುವ ಕಾರಣ ಇದರ ಬಗ್ಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

Tags: BangaloreBJPBJP MLA's allegation.Congress PartyDCM DK Shivakumarimportance of guarantee schemesR. Ashok's statement.
Previous Post

ಧನುಷ್ ವಿರುದ್ದ ಲೇಡಿ ಸೂಪರ್ ಸ್ಟಾರ್ ಗರಂ -3 ಸೆಕೆಂಡ್ ಗೆ 10 ಕೋಟಿ ಪರಿಹಾರದ ನೋಟಿಸ್‌..!!

Next Post

ಬಿಜೆಪಿ ಅವರು ಮುಚ್ಚಿಕೊಂಡು ಇದ್ದರೆ ಸರಿ..ಇಲ್ಲದಿದ್ದರೆ.

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಬಿಜೆಪಿ ಅವರು ಮುಚ್ಚಿಕೊಂಡು ಇದ್ದರೆ ಸರಿ..ಇಲ್ಲದಿದ್ದರೆ.

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada