ತುಮಕೂರು: : ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿ ವಿಚಾರಗಳನ್ನು ಬದಿಗೊತ್ತಿ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅನುಷ್ಠಾನ ಮಾಡಿಲ್ಲ.ಕಾಂಗ್ರೆಸ್ ಸುಳ್ಳು ಹೇಳುತ್ತಿದೆ’ ಎಂಬ ರೀತಿಯಲ್ಲಿ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ.ಹಾಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ ಎಂದರು.
ಮಹಾರಾಷ್ಟ್ರದ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಮತ್ತೊಮ್ಮೆ ಜಾಹೀರಾತು ಪರಿಶೀಲಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿದರು.