• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ.

ADVERTISEMENT

ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಭೈರತಿ ರಣಗಲ್” ಚಿತ್ರ ದೂರ ಮಾಡಿದೆ.ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.ಈ ಯಶಸ್ಸಿನ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಮಫ್ತಿ” ಚಿತ್ರದಲ್ಲಿ ನನ್ನ “ಭೈರತಿ ರಣಗಲ್” ಪಾತ್ರವನ್ನು ನೀವು ಇಷ್ಟಪಟ್ಟಿದ್ದಿರಿ. ಆದರೆ “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ನೀವು ಹೃದಯಕ್ಕೆ ತೆಗೆದುಕೊಂಡಿದ್ದೀರ. ನಿಮಗೆ ತುಂಬು ಹೃದಯದ ಧನ್ಯವಾದ ಎಂದು ಅಭಿಮಾನಿಗಳಿಗೆ ವಿಶೇಷ ಧನ್ಯವಾದ ತಿಳಿಸಿ ಮಾತನಾಡಿದ ಶಿವರಾಜಕುಮಾರ್, ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ.ಈ ಯಶಸ್ಸು ನನ್ನೊಬ್ಬನದಲ್ಲ.

ಇಡೀ ತಂಡದು. ಮುಂದೆ “ಮಫ್ತಿ ೨” ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತ ಮಾಡುತ್ತೇನೆ.ಆದರೆ ಶೀರ್ಷಿಕೆ “ಮಫ್ತಿ ೨” ಅಂತ ಇರುವುದಿಲ್ಲ.ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆ ಎಂದರು.

ಅಪ್ಪಾಜಿ ಅವರು ಹೇಳಿದ ಹಾಗೆ ಈ ಯಶಸ್ಸಿಗೆ ಮುಖ್ಯ ಕಾರಣ ಅಭಿಮಾನಿ ದೇವರುಗಳು. ಅವರಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ ಎಂದು ಮಾತು ಆರಂಭಿಸಿದ ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನರ್ತನ್ ಅವರು ಬಂದು ಈ ಚಿತ್ರದ ಕಥೆ ಹೇಳಿದಾಗ, ನಾನು ಅವರು “ಮಫ್ತಿ”ಯ ಸೀಕ್ವೆಲ್ ಹೇಳಬಹುದು ಅಂದುಕೊಂಡೆ.ಅವರು ಪ್ರೀಕ್ವೆಲ್ ಹೇಳಿದರು.ಈ ಚಿತ್ರದ ಯಶಸ್ಸಿನ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು.ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣರಾದ ಇಡೀ ತಂಡಕ್ಕೆ ಧನ್ಯವಾದ. ನಮ್ಮ ಸಂಸ್ಥೆಯಿಂದ ಮುಂದೆ ಕೂಡ ಉತ್ತಮ ಚಿತ್ರಗಳನ್ನು ನಿರ್ಮಿಸುವುದಾಗಿ ಹೇಳಿದರು.

ಈ ಚಿತ್ರ ಆಗಲು ಮುಖ್ಯ ಕಾರಣ ಶಿವಣ್ಣ ಅವರ ಅಭಿಮಾನಿಗಳು. ಅವರು “ಮಫ್ತಿ” ಚಿತ್ರದ ಯಶಸ್ಸಿನ ನಂತರ, “ರಣಗಲ್” ಚಿತ್ರ ಮಾಡಿ ಎಂದು ಹೇಳಿದ್ದರು. ಈ ಚಿತ್ರ ಆಗಲು ಅವರೆ ಮುಖ್ಯ ಕಾರಣ ಎನ್ನಬಹುದು. ಆನಂತರ ನನ್ನನ್ನು ಕರೆದು ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು “ಭೈರತಿ ರಣಗಲ್” ಚಿತ್ರ ಮಾಡಲು ಅಡ್ವಾನ್ಸ್ ನೀಡಿದ್ದು ಗೀತಾ ಶಿವರಾಜಕುಮಾರ್ ಅವರು. ಅವರಿಗೆ ಹಾಗೂ ರಣಗಲ್ ಪಾತ್ರಕ್ಕೆ ಜೀವ ತುಂಬಿದ ಶಿವರಾಜಕುಮಾರ್ ಅವರಿಗೆ ಮತ್ತು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ನರ್ತನ್.

ಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ.ಅದಕ್ಕೆ ಈ ಚಿತ್ರವೇ ಉದಾಹರಣೆ. ಬಿಡುಗಡೆಯಾದ ದಿನದಿಂದ ಎಲ್ಲಾ ಚಿತ್ರಮಂದಿರಗಳಲ್ಲೂ “ಭೈರತಿ ರಣಗಲ್” ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ.ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆ ಎಂದರು ವಿತರಕ ಜಗದೀಶ್.

Tags: "Mufti 2"Actors like AvinashBabu Hirannaiahcinematographer Naveen KumarDancing Rose Shabirdirected by Narthan and starring Sivarajkumar .editor Akshayfilm "Bhairati Rangal"Geetha PicturesGopalkrishna DeshpandeMadhu Guruswamymake "Rangal".muftiPratapProduced by Geetha Sivarajkumarsandalowwodstarring Sivarajkumar
Previous Post

ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !

Next Post

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕೆ ಶತದಿನದ ಸಂಭ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada