• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ:ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರು,: ವಿದ್ಯಾಸಿರಿ ಯೋಜನೆಯಡಿ (Vidyashree Yojana)ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.ಅವರು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ( Sri Bhakta Kanakadasara)ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ADVERTISEMENT

ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.

Chaluvarayaswamy on Byelection Result: ಚನ್ನಪಟ್ಟಣದ ಸೋಲಿಗೆ ಗೌಡ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಕೌಂಟರ್

ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು.

ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಗ್ಯಾರಂಟಿ ಯೋಜನೆಗಳು ಜಾರಿ:

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.ಕೋಟಿ 22 ಲಕ್ಷ ಕುಟುಂಬಗಳ ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ವರ್ಷಕ್ಕೆ 32 ಸಾವಿರ ಕೋಟಿ ಒದಗಿಸಲಾಗುತ್ತಿದೆ ಎಂದರು. 0ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಈ ಯೋಜನೆಗಳು ಜಾರಿಯಾಗಿವೆ. ವರ್ಷಕ್ಕೆ 50-60 ಸಾವಿರ, ತಿಂಗಳಿಗೆ 4-5 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ.ನಾನು ಹಳ್ಳಿಯಿಂದ ಬಂದು ನನ್ನ ಹಾಗೆ ಕಷ್ಟ ಪಡಬಾರದೆಂದು ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ:ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ.ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಪ್ರತಿದಿನ ಅಭ್ಯಾಸ ಮಾಡಲು ಸಲಹೆ:ಆದ್ದರಿಂದ ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಲು ಹೇಳಿದರು. ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ ಎಂದರು.

ನೀತಿ ಮತ್ತು ಶಿಸ್ತು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣ. ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು ಅದಕ್ಕಾಗಿ ಶ್ರಮವಹಿಸಬೇಕು.ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ. ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು ಸಮಾಜದಲ್ಲಿ ತುಳಿತಕ್ಕೊಳಗಾದವರ ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ರಾಮಧಾನ್ಯ ಚರಿತೆ ಅಕ್ಕಿಗೂ ರಾಗಿಗೂ ಒಮ್ಮೆ ಯಾರು ಶ್ರೇಷ್ಠ ಎನ್ನುವ ಪೈಪೋಟಿ ಶುರುವಾಯಿತು. ಎರಡೂ ಶ್ರೀರಾಮನ ಬಳಿ ಹೋದವು. ಆಗ ಒಂದು ಹಗೆಯಲ್ಲಿ ರಾಗಿ ಮತ್ತೊಂದರಲ್ಲಿ ಭತ್ತ ಹಾಕಲಾಯಿತು ಮತ್ತು ಅದನ್ನು ಆರು ತಿಂಗಳ ನಂತರ ಪರೀಕ್ಷಿಸಲು ತೀರ್ಮಾನಿಸಲಾಯಿತು. ಆರು ತಿಂಗಳ ನಂತರ ಪರೀಕ್ಷಿಸಲಾಗಿ ಭತ್ತವು ಬೂದಿ ಹಿಡಿದು ಹಾಳಾಗಿತ್ತು , ಅದೇ ರಾಗಿ ಘಮಘಮಿಸುತ್ತಿತ್ತು ಇದರಿಂದ ಬಡವರ ಆಹಾರವಾದ ರಾಗಿಯು ಸರ್ವಶ್ರೇಷ್ಠ ಎಂದು ಸಾಬೀತಾಯಿತ್ತು ಮಾತ್ರವಲ್ಲ ಸತ್ವವುಳ್ಳ ಆಹಾರ ಎಂದು ಸಾಬೀತಾಯಿತು.ಇದರಿಂದ ರಾಗಿ ಕಳಪೆಯಲ್ಲ ಅಕ್ಕಿಯನ್ನು ಶ್ರೀಮಂತರು ಉಪಯೋಗಿಸುತ್ತಾರೆ ಎಂದು ಅದು ಮೇಲಲ್ಲ ಎಂದು ಮಕ್ಕಳಿಗೆ ರಾಮಧಾನ್ಯ ಚರಿತೆ ಕತೆ ಹೇಳಿದರು.

ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅನ್ನಭಾಗ್ಯ ಸಿಗಲಿ ಎನ್ನುವ ಉದ್ದೇಶದಿಂದಲೇ ಆ ಯೋಜನೆ ಶುರು ಮಾಡಿದ್ದಾಗಿ ಹೇಳಿದರು.

Tags: Chief Minister promisedCongress PartyMysoreRamdhana ChariteRs 1500 to Rs 2000 from next year.Vidyasiri Scholarship
Previous Post

ಮಡಿಕೇರಿ ಗದ್ದುಗೆ ಪುರಾತತ್ವ ಜಾಗ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ: ಆತಂಕದಲ್ಲಿ ಹಿಂದೂ-ಮುಸ್ಲಿಂ ಕುಟುಂಬಗಳು

Next Post

ರೆಸ್ಟೋರೆಂಟ್ ಊಟಕ್ಕೆ 5% ತೆರಿಗೆ, ಆರೋಗ್ಯ ವಿಮಾ ಮೇಲೆ 18% ತೆರಿಗೆ !! ಇದೆಂಥಾ ವ್ಯವಸ್ಥೆ ?! – GST ಸ್ಲಾಬ್ & ತೆರಿಗೆ ನೀತಿ ವಿರುದ್ಧ ವ್ಯಕ್ತಿಯ ಪೋಸ್ಟ್ ವೈರಲ್ ! 

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025
Next Post
ರೆಸ್ಟೋರೆಂಟ್ ಊಟಕ್ಕೆ 5% ತೆರಿಗೆ, ಆರೋಗ್ಯ ವಿಮಾ ಮೇಲೆ 18% ತೆರಿಗೆ !! ಇದೆಂಥಾ ವ್ಯವಸ್ಥೆ ?! – GST ಸ್ಲಾಬ್ & ತೆರಿಗೆ ನೀತಿ ವಿರುದ್ಧ ವ್ಯಕ್ತಿಯ ಪೋಸ್ಟ್ ವೈರಲ್ ! 

ರೆಸ್ಟೋರೆಂಟ್ ಊಟಕ್ಕೆ 5% ತೆರಿಗೆ, ಆರೋಗ್ಯ ವಿಮಾ ಮೇಲೆ 18% ತೆರಿಗೆ !! ಇದೆಂಥಾ ವ್ಯವಸ್ಥೆ ?! - GST ಸ್ಲಾಬ್ & ತೆರಿಗೆ ನೀತಿ ವಿರುದ್ಧ ವ್ಯಕ್ತಿಯ ಪೋಸ್ಟ್ ವೈರಲ್ ! 

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada