• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ:ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 26, 2024
in Top Story, ಇತರೆ / Others, ಕರ್ನಾಟಕ
0
ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ:ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75 ನೇ ವರ್ಷದ ಸಂವಿಧಾನ ಅಂಗೀಕರಣ ದಿನೋತ್ಸವವನ್ನು ಉದ್ಘಾಟಿಸಿ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು.

ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಬಾಬಾ ಸಾಹೇಬರು ಹೇಳಿದ್ದರು‌. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.

ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಬ್ರಾತೃತ್ವವನ್ನು ಪಾಲಿಸಬೇಕು ಎಂದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಎಚ್ಚರಿಕೆ ನಮಗೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ RSS ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.

ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಎಚ್ಚರಿಸಿದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ.ಮೋದಿ ಮಂತ್ರಿ ಮಂಡಲದಲ್ಲಿ ಮಂತ್ರಿ ಆಗಿದ್ದ ಅನಂತ ಕುಮಾರ ಹೆಗ್ಡೆ ಅವರು, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡರು. ಆದರೆ ಮೋದಿಯವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸಲಿಲ್ಲ. ಅವರನ್ನು ಮಂತ್ರಿ ಸ್ಥಾನದಿಂದ ಇಳಿಸಲಿಲ್ಕ. ಆದ್ದರಿಂದ ಅನಂತ ಕುಮಾರ ಹೆಗ್ಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ. ಇದನ್ನು ದೇಶದ ಜನತೆ ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು.ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು.ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು.

ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು‌.ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ ಎಂದರು.ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು.ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ ಎಂದರು.

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದರು.

Tags: anti-constitutionbengalurucaste system createdCM Siddaramaiah‌Congress PartyEducators have not developedEnvironment Minister Eshwar Khandreinequality-humanrationality-scientism
Previous Post

ಗ್ಯಾರೆಂಟಿಗಳನ್ನು ಕೈ ಬಿಡಲು ಸಿಎಂಗೆ ಮನವಿ ಮಾಡ್ತಿವಿ : ಕಾಂಗ್ರೆಸ್‌ ಶಾಸಕ ಗವಿಯಪ್ಪ ಹೊಸ ರಾಗ ! 

Next Post

ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ – FSL ರಿಪೋರ್ಟ್ ನಲ್ಲಿ ಧೃಢ ! 

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ – FSL ರಿಪೋರ್ಟ್ ನಲ್ಲಿ ಧೃಢ ! 

ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ - FSL ರಿಪೋರ್ಟ್ ನಲ್ಲಿ ಧೃಢ ! 

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!