• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತತ 200 ನಿಮಿಷಗಳ ಕಾಲ ನಡೆದ ಸಭೆ- ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ.

ಪ್ರತಿಧ್ವನಿ by ಪ್ರತಿಧ್ವನಿ
November 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಮುಖ್ಯಮoತ್ರಿಯವರು ನೀಡಿದ ಇತರೆ ಸೂಚನೆಗಳು…ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

ADVERTISEMENT

ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು.ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸoಪರ್ಕ ಕಲ್ಪಿಸಬೇಕು.ಪಡಿತರ ಚೀಟಿ ಹೊoದಿಲ್ಲದ ಬುಡಕಟ್ಟು ಕುಟುoಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸಬೇಕು.-ಅರಣ್ಯ ಹಕ್ಕು ಸಮಿತಿಗಳ ಮುoದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.

ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು. -ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು.-ಬುಡಕಟ್ಟು ಸಮುದಾಯ ಕಲ್ಪಿಸುವ ವಿಷಯದಲ್ಲಿ ಕoದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿoದ ಕಾರ್ಯ ನಿರ್ವಹಿಸಬೇಕು.

ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರ್ಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.

ಎರಡು ತಿoಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು.

ಮನೆ ನಿರ್ಮಾಣ:-ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮoತ್ರಿ ಅವರು ಸೂಚನೆ ನೀಡಿದರು.

ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು.-ಮೈಸೂರು ಜಿಲ್ಲೆಯಲ್ಲಿ 2963ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 1222 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ.

ಚಾಮರಾಜನಗರ ಜಿಲ್ಲೆಯಲ್ಲಿ 5164 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 234 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 2761 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ.

ಕೊಡಗು ಜಿಲ್ಲೆಯಲ್ಲಿ 2882 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 1050 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 1182 ಕುಟುಂಬಗಳಿಗೆ ನಿವೇಶನ ಇದ್ದರೂ ಮನೆ ಇರುವುದಿಲ್ಲ.

ವಿದ್ಯುತ್‌ ಸಂಪರ್ಕ-ಮೈಸೂರು ಜಿಲ್ಲೆಯಲ್ಲಿ 194 ಹಾಡಿಗಳು ಅರಣ್ಯದಂಚಿನಲ್ಲಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 21 ಹಾಡಿಗಳ ಪೈಕಿ ಮೂರು ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, 18 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ ಎಲ್ಲಾ 125 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 33 ಹಾಡಿಗಳ ಪೈಕಿ 15 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದಿರುವ 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ಕೊಡುಗು ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ 211 ಹಾಡಿಗಳ ಪೈಕಿ 154 ಹಾಡಿಗಳಿಗೆ ಹಾಗೂ ಅರಣ್ಯದೊಳಗಿರುವ 74 ಹಾಡಿಗಳ ಪೈಕಿ 57 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 17 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 5 ಹಾಡಿಗಳಿಗೆ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿಯಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮತಿ ನೀಡಿ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. -ಮೈಸೂರು ಜಿಲ್ಲೆಯಲ್ಲಿ 215ಹಾಡಿಗಳಿದ್ದು, 49,778 ಜನರು ವಾಸಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 158 ಹಾಡಿಗಳಿದ್ದು, 27,763 ಜನರು ವಾಸಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ 228 ಹಾಡಿಗಳಿದ್ದು, 26,909 ಮಂದಿ ವಾಸಿಸುತ್ತಿದ್ದಾರೆ.

ಹಕ್ಕುಪತ್ರ ವಿತರಣೆ:-ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.ಹಕ್ಕುಪತ್ರ ಹೊಂದಿದವರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕುರಿತು ಕ್ರಮ ಕೈಗೊಳ್ಳಬೇಕು.

ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಗೆ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿ ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 6,363 ಎಕ್ರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 6,808 ಅರ್ಜಿಗಳು ತಿರಸ್ಕೃತಗೊಂಡಿದ್ದು, ವಿಲೇವಾರಿ ಮಾಡಲು ಬಾಕಿಯಿರುವ 558 ಅರ್ಜಿಗಳನ್ನು ಪರಿಶೀಲಿಸಿ ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು.

ಅರಣ್ಯ ಹಕ್ಕು ಕಾಯ್ದೆಯಡಿ ಇತರ ಪಾರಂಪರಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಲಾಗಿದ್ದು, 531 ಹಕ್ಕುಪತ್ರ ವಿತರಿಸಿ 104 ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 1,095 ಅರ್ಜಿಗಳು ತಿರಸ್ಕೃತಗೊಂಡಿವೆ.ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕುಪತ್ರಕ್ಕಾಗಿ 260 ಅರ್ಜಿ ಸ್ವೀಕರಿಸಲಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕ್ರೆ ವಿಸ್ತೀರ್ಣ ಪ್ರದೇಶ ಸಮುದಾಯ ಅರಣ್ಯ ಹಕ್ಕು ಒದಗಿಸಲಾಗಿದೆ.

Tags: 200 minutesChief Minister SiddaramaiahCM warns of action against District CollectorsCongress PartyContinuous meeting heldinstructions issuedtribal communities
Previous Post

ಹನುಮಂತ ನೀಡಿದ ಕಾರಣಕ್ಕೆ ಶೋಭಾ ಗರಂ – ಮಹಾರಾಜರ ವಿರುದ್ಧ ಧ್ವನಿ ಎತ್ತಿದ ಶೋಭಾ.!

Next Post

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು - ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada