ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ (Bangalore mysore express highway) ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ಸಿಗೆ ಗುದ್ದಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಡಸರು ಮತ್ತು ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರದ ಸಂಗಬಸವನದೊಡ್ಡಿ ಬಳಿ ನಿನ್ನೆ ರಾತ್ರಿ (ನ.26) ರಾತ್ರಿ 9.30ಕ್ಕೆ ಈ ಘಟನೆ ಸಂಭವಿಸಿದೆ.
ಈ ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರಿನ ಶಿವಾಜಿನಗರದ (Shivajinagar) ನಿವಾಸಿಗಳಾದ ಲಿಯಾಕತ್, ಅಸ್ಮಾ ,ನೂರ್ ಮೃತ ಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಈ ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಬಂದ ರಾಮನಗರ ಟ್ರಾಫಿಕ್ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.