• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ:ಮಹಾಂತೇಶ ಬೀಳಗಿ

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ADVERTISEMENT

ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು.ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ ನಡೆಯಲಿದೆ” ಎಂದರು.

“ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಸರ್ಕಾರಿ ನೌಕರರು, ವಿಶೇಷವಾಗಿ ಸಚಿವಾಲಯ ನೌಕರರಿಗೆ ಮಾರಾಟಗಾರರಿಂದ ರಿಯಾಯ್ತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ. ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಏರುತ್ತಿರುವ ವಾಹನಗಳ ಇಂಧನ ದರ, ನಗರದ ವಾಯುಮಾಲಿನ್ಯ ತಡೆಗೆ ಇವಿ ವಾಹನಗಳ ಬಳಕೆಯೇ ಪರಿಹಾರ. ಇಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ಸಹ ಇರುವುದಿಲ್ಲ. ಸಚಿವಾಯ ನೌಕರರಿಗೆ ಡೌನ್‌ಪೇಮೆಂಟ್‌ ಇಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ. ಮೇಳದಲ್ಲಿ ಭಾಗವಹಿಸಲು ಇವಿ ಸಂಸ್ಥೆಗಳು ಆಸಕ್ತಿ ತೋರಿದ್ದು, ಈ ಮಾರಾಟ ಕೇವಲ ಮೇಳಕ್ಕೆ ಸೀಮಿತವಾಗಿರದೇ ಮುಂದಿನ ದಿನಗಳಲ್ಲೂ ವಿಶೇಷ ಮಾರಾಟ ಮುಂದುವರಿಸಲಿದ್ದಾರೆ” ಎಂದು ವಿವರಿಸಿದರು.

“ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಇಂಧನ ಇಲಾಖೆ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿರುವುದನ್ನು ಸ್ಮರಿಸಬಹುದು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇವಿ ವಾಹನಗಳ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಹಾಗೂ ಇವಿ ಮಿತ್ರ ಆ್ಯಪ್‌ ಪ್ರಯೋಜನ ಪಡೆಯುವಂತೆ ವಿನಂತಿಸುತ್ತೇನೆ” ಎಂದರು.ವಿಶೇಷ ಇವಿ ಮೇಳ ಆಯೋಜಿಸುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ, ಮೇಳಕ್ಕೆ ಸಂಘದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.ಸಭೆಯಲ್ಲಿ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್‌, ಹಿರಿಯ ಅಧಿಕಾರಿಗಳು, ಸಚಿವಾಲಯ ನೌಕರರ ಸಂಘದ ಪದಾಧಿಕಾರಿಗಳು, ಇವಿ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

Tags: BangaloreBescomChief Secretary Shalini Rajneesh.Deputy Chief Secretary of Energy Department Gaurav Gupta."Energy Minister KJ GeorgeEV VehicleMahantesh FallagiMinistry Employees
Previous Post

ಮೋದಿ ಭೇಟಿಯಾಗಿ ಮನವಿ ಪತ್ರ ನೀಡಿದ ಸಿಎಂ ! ನಬಾರ್ಡ್, ಭದ್ರಾ ಯೋಜನೆಗೆ ಸೇರಿ ಹಲವು ವಿಚಾರ ಉಲ್ಲೇಖಿಸಿದ ಸಿದ್ದು ! 

Next Post

ಹಾಸನ:ಡಿಸೆಂಬರ್ 5ರಂದು ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಹಾಸನ:ಡಿಸೆಂಬರ್ 5ರಂದು ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

ಹಾಸನ:ಡಿಸೆಂಬರ್ 5ರಂದು ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada