ರಾಜ್ಯ ಸರ್ಕಾರಕ್ಕೆ ಸದ್ಯ ಸಂಪುಟ ಪುನಾರಚನೆ (Cabinet reshuffle) ಟಾಸ್ಕ್ ಎದುರಾಗಿದ್ದು, ಈ ಮಧ್ಯೆ ಒಂದೊಂದೇ ನಾಯಕರು ಎದ್ದು ನಿಲ್ಲಲು ಶುರು ಮಾಡಿದ್ದಾರೆ. ಆದ್ರೆ ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Cm siddaramaiah) ಸಚಿವ ಸಂಪುಟ ಪುನಾರಚನೆ ಬಗ್ಗೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಸದ್ಯ ಸರ್ಕಾರದಲ್ಲಿ ಸಂಪುಟ ಪುನಾರಚನೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್’ನ ಹಲವು ಶಾಸಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಆದರೆ ಸಚಿವ ಸ್ಥಾನ ಆಕಾಂಕ್ಷಿಗಳಿಗೆ CM ಬೇಸರದ ಸುದ್ದಿ ನೀಡಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ CM ಸಿದ್ದರಾಮಯ್ಯ, ಸಂಪುಟ ವಿಸ್ತರಣೆ, ಪುನಾರಚನೆಯ ಉದ್ದೇಶ ಸದ್ಯಕ್ಕಿಲ್ಲ ಎಂದಿದ್ದಾರೆ.
ಈಗ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ವಿಚಾರವಾಗಿ ರಾಹುಲ್ ಗಾಂಧಿ (Rahul gandhi), ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಅವರೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಕೆಲವು ನಾಯಕರಿಗೆ ನಿರಾಸೆಯಾಗಿದೆ.