• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರ ಡಿಸೆಂಬರ್ 25ರಂದು‌ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ .

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram
ADVERTISEMENT

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ (S Tanu V Creations) ಹಾಗೂ ಕಿಚ್ಚ ಕ್ರಿಯೇಷನ್ಸ್ (Kiccha Creations)ನಿರ್ಮಾಣದ, ವಿಜಯ್ ಕಾರ್ತಿಕೇಯ (Vijay Karthikeya Direction)ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Abhinaya Chakravarthy Kiccha Sudheep) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” (Max)ಚಿತ್ರ ಇದೇ ಡಿಸೆಂಬರ್ 25 (Dec 25) ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಾಯಕ ಸುದೀಪ್, ನಿರ್ದೇಶಕ ವಿಜಯ್‍ ಕಾರ್ತಿಕೇಯ, ನಿರ್ಮಾಪಕ ಕಲೈಪುಲಿ ಎಸ್.ಧಾನು, ಸುಧಾ ಬೆಳವಾಡಿ, ಕರಿಸುಬ್ಬು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೇ, ವಿಜಯ್‍ ಚೆಂಡೂರು, ನಾಗರಾಜ್, ಅನಿರುದ್ದ್, ಪ್ರವೀಣ್, ಸಂಗೀತ ನಿರ್ದೇಶಕ ಅಜನೀಶ್‍ ಲೋಕನಾಥ್‍, ಛಾಯಾಗ್ರಾಹಕ ಶೇಖರ್ ಚಂದ್ರ, ಸಾಹಸ ನಿರ್ದೇಶಕ ಚೇತನ್‍ ಡಿ’ಸೋಜ, ಕಲಾ ನಿರ್ದೇಶಕ ಶಿವಕುಮಾರ್, ಸಂಕಲನಕಾರ ಗಣೇಶ್ ಬಾಬು, ಕಾರ್ಯಕಾರಿ ನಿರ್ಮಾಪಕ ಶ್ರೀರಾಮ್ ಮುಂತಾದವರು ಹಾಜರಿದ್ದರು.

ನಾನು ಈ ಚಿತ್ರ ಒಪ್ಪುವುದಕ್ಕೆ ಮೂಲ‌ ಕಾರಣ ನಿರ್ದೇಶಕ ವಿಜಯ್‍ ಕಾರ್ತಿಕೇಯ‌ ಎಂದು ಮಾತು ಆರಂಭಿಸಿದ ಸುದೀಪ್, ವಿಜಯ್ ಅವರು ಬಂದು ಹೇಳಿದ ಕಥೆ ಚೆನ್ನಾಗಿರಲಿಲ್ಲ ಎಂದರೆ ಯಾವುದೂ ಇಲ್ಲಿಯವರೆಗೂ ಬರುತ್ತಿರಲಿಲ್ಲ. ಧಾನು ಅವರು ಹಿರಿಯ ನಿರ್ಮಾಪಕರು. ಅವರು ಕಳಿಸಿಕೊಟ್ಟರು. ಕಥೆ ಚೆನ್ನಾಗಿರಲಿಲ್ಲ ಎಂದರೆ, ಬೇರೆ ಕಥೆ ಹುಡುಕುತ್ತಿದ್ದವೇನೋ. ಆದರೆ, ವಿಜಯ್‍ ಹೇಳಿದ ಕಥೆ ಬಹಳ ಇಷ್ಟವಾಯಿತು. ಚೆನ್ನೈನಿಂದ ಬಂದ ಅವರನ್ನು ಇಲ್ಲೇ ಉಳಿಸಿಕೊಂಡು, ಅವರ ಜೊತೆಗೆ ಕೂತು ಸಾಕಷ್ಟು ಚರ್ಚೆ ಮಾಡಿ, ಈ ಕಥೆಯನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸಲಾಯಿತು.


2004ರಲ್ಲಿ ಚೆನ್ನೈನಲ್ಲಿ ‘ನಲ್ಲ’ ಚಿತ್ರಕ್ಕೆ ಚಿತ್ರೀಕರಣ ಮಾಡುತ್ತಿದ್ದೆ. ‘ಕಾಕ್ಕಾ ಕಾಕ್ಕಾ’ ಎಂಬ ಚಿತ್ರ ಬಹಳ ಚೆನ್ನಾಗಿ ಓಡುತ್ತಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರೀಮೇಕ್‍ ಮಾಡುವ ಯೋಚನೆಯಿಂದ ಧಾನು ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಹೋಗಿ ಭೇಟಿಯಾದೆ. ಮೊದಲ ದಿನ ಬಹಳ ಟೆನ್ಶನ್‍ನಲ್ಲಿದ್ದರು. ‘ಕಾಕ್ಕಾ ಕಾಕ್ಕಾ’ ಚಿತ್ರದ ಹಕ್ಕುಗಳನ್ನು ಕೊಡೋಕೆ ಸಾಧ್ಯವಾ ಎಂದೆ. ಆಸೆಪಟ್ಟು ಬಂದಿದ್ದೀರಾ. ನನಗೇನು ಬೇಡ ಎಂದು ತಕ್ಷಣವೇ ಉಚಿತವಾಗಿ ಹಕ್ಕುಗಳನ್ನು ಬರೆದುಕೊಟ್ಟರು. ಅಂತಹ ಸಹೃದಯಿ ಹಿರಿಯ ನಿರ್ಮಾಪಕರ ಜತೆಗೆ ಸಿನಿಮಾ‌ ಮಾಡಿರುವುದು ಖುಷಿಯಾಗಿದೆ. ಈ ಚಿತ್ರವನ್ನು ನೋಡಬೇಕು ಎಂದು ನಮ್ಮ ತಾಯಿ ಹೇಳಿದ್ದರು. ಆ ಆಸೆ ಈಡೇರಲಿಲ್ಲ.

ಅವರ ಆಶೀರ್ವಾದ ಚಿತ್ರದ ಮೇಲಿರುತ್ತದೆ. ಆಗಾಗ ಅವರಿಗೆ ಕೆಲವು ತುಣುಕುಗಳನ್ನು ತೋರಿಸುತ್ತಿದ್ದೆ. ಇನ್ನು, ಚಿತ್ರತಂಡದ ಎಲ್ಲರೂ ನನ್ನನ್ನು ಹೊಗಳುತ್ತಿದ್ದಾರೆ. ಎಲ್ಲರಿಗೂ ಪ್ರಮುಖ ಪಾತ್ರಗಳಿವೆ. ಎಲ್ಲರೂ ಬಹಳ ಚೆನ್ನಾಗಿ ತಮ್ಮ ಕೆಲಸವನ್ನು ನಿರ್ವಹಿಸಿದ್ದಾರೆ. ಎಲ್ಲರ ಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದು ಒಂದು ರಾತ್ರಿಯ ಕಥೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಬಹಳ ಕಷ್ಟ ಪಟ್ಟಿದ್ದೇವೆ. ನಾನೊಬ್ಬನೇ ಅಲ್ಲ, ಎಲ್ಲರಿಗೂ ಕಷ್ಟವಾಗಿದೆ. ಬೆಂಕಿ, ಧೂಳೀನಲ್ಲಿ ನೈಟ್‍ ಎಫೆಕ್ಟ್ ಚಿತ್ರೀಕರಣ. . ನನಗೆ ಚಿತ್ರದ ವೇಗ ಇಷ್ಟವಾಯಿತು. ಯಾವುದನ್ನೂ ಅನಗತ್ಯವಾಗಿ ತುರುಕಿಲ್ಲ. ಅಜನೀಶ್‍ ಸಹ ಚಿತ್ರ ನೋಡಿ ಚಿತ್ರ ವೇಗವಾಗಿದೆ ಎಂದರು. ಈ ಚಿತ್ರದಲ್ಲಿ ನಿಷ್ಠಾವಂತ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಅರ್ಜುನ್ ಮಹಾಕ್ಷಯ್‍ ನನ್ನ ಪಾತ್ರದ ಹೆಸರು. ಎಲ್ಲರೂ ಮ್ಯಾಕ್ಸ್ ಅಂತ ಕರೆಯುತ್ತಿರುತ್ತಾರೆ ಎಂದರು.

ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಅನೇಕ ಭಾಷೆಗಳಲ್ಲಿ ರಜನಿಕಾಂತ್ ಸೇರಿದಂತೆ ಅನೇಕ ಹೆಸರಾಂತ ಕಲಾವಿದರ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಕನ್ನಡದಲ್ಲಿ “ಮ್ಯಾಕ್ಸ್” ನನ್ನ ನಿರ್ಮಾಣದ ಮೊದಲ ಚಿತ್ರ. ಈ ಚಿತ್ರದ ಕುರಿತು ಸುದೀಪ್ ಅವರಿಗೆ ಫೊನ್ ಮಾಡಿ, ಒಂದೊಳ್ಳೆಯ ಕಥೆ ಇದೆ. ಅದನ್ನು ನೀವು‌ ಕೇಳಿ. ನಿಮಗೆ ಇಷ್ಟವಾದರೆ ಸಿ‌ನಿಮಾ‌ ಮಾಡೋಣ ಎಂದು ಹೇಳಿದೆ.‌ ಅವರಿಗೆ ಕಥೆ ಇಷ್ಟವಾಯಿತು. ಚಿತ್ರ ಆರಂಭವಾಯಿತು. ಕನ್ನಡದಲ್ಲಿ ಚಿತ್ರ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ. ಇದೇ ಡಿಸೆಂಬರ್ 25 ರಂದು ನಮ್ಮ‌ ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕಲೈಪುಲಿ ಎಸ್ ಧಾನು.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕ ಧಾನು ಅವರಿಗೆ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ. ಇದೊಂದು ಒಂದೇ ರಾತ್ರಿಯಲ್ಲಿ ನಡೆಯುವ ಎಮೋಷನಲ್ ಆಕ್ಷನ ಕಥಾಹಂದರ ಹೊಂದಿರುವ ಚಿತ್ರ. ಚಿತ್ರತಂಡದ ಸಹಕಾರದಿಂದ “ಮ್ಯಾಕ್ಸ್” ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ವಿಜಯ್ ಕಾರ್ತಿಕೇಯ ತಿಳಿಸಿದರು.

Munirathna Audio Viral : ಮುನಿರತ್ನ ರಾಸಲೀಲೆ  ಆಡಿಯೋ ವೈರಲ್ #pratidhvani
Tags: Abhinaya ChakravarthyHindhikannada cinemaKannada movieKiccha sudheepMalayalamMaxPan IndiaTamil.telugu
Previous Post

ಸುದ್ದಿ ಓದಲು ರೆಡಿಯಾಗಿದ್ದಾರೆ ಬಿಗ್ ಬಾಸ್ ಸ್ಪರ್ಧಿಗಳು .!

Next Post

ಎಲ್ಲಾ ಜಾತಿ ಧರ್ಮದವರು ದೇಶದ GDP ಗೆ ಕೊಡುಗೆ ನೀಡಿದ್ದಾರೆ – ಸಿಎಂ ಸಿದ್ದರಾಮಯ್ಯ !

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

May 1, 2026
Next Post
ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಕಾಂಗ್ರೆಸ್ ನಲ್ಲೇ ವಿರೋಧ ! 

ಎಲ್ಲಾ ಜಾತಿ ಧರ್ಮದವರು ದೇಶದ GDP ಗೆ ಕೊಡುಗೆ ನೀಡಿದ್ದಾರೆ - ಸಿಎಂ ಸಿದ್ದರಾಮಯ್ಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada