• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಖಿಲ್ ನೇತೃತ್ವದ ನಿಯೋಗ

ADVERTISEMENT

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕೋರಿದ ಯುವ ಜನತಾದಳ ರಾಜ್ಯಾಧ್ಯಕ್ಷ

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

CM Siddaramaiah: ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಜಿಡಿಪಿ ನಂಬರ್‌ ಸಿಎಂ ಸಿದ್ದರಾಮಯ್ಯ..! #gdp #karnataka

ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಅವರು ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

Ends

Tags: BJPCongress PartyDelhihd kumarswamyMallesh BabuNikhil Kumarswamypiyush goyalTobbacoyaduveer krishnadatta chamaraja wadiyarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಕಲಿ ನೋಟಿಸ್‌.. ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್‌ & ಟೀಂ

Next Post

ಮೋಹನ್ ಭಾಗವತ್ ರ ಮೂರು ಮಕ್ಕಳ ಹೇಳಿಕೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಅಸಮಾಧಾನ!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಮೋಹನ್ ಭಾಗವತ್ ರ ಮೂರು ಮಕ್ಕಳ ಹೇಳಿಕೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಅಸಮಾಧಾನ!

ಮೋಹನ್ ಭಾಗವತ್ ರ ಮೂರು ಮಕ್ಕಳ ಹೇಳಿಕೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಅಸಮಾಧಾನ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada