ಸಚಿವ ಜಮೀರ್ ಅಹ್ಮದ್ (Zameee agenda khan) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಲೋಕಾಯುಕ್ತ ಪೊಲೀಸರ (Lokayukta) ಮುಂದೆ ಹಾಜರಾಗ್ತಾರಾ ಸಚಿವ ಜಮೀರ್ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದರು.
ಹೀಗಾಗಿ ಇಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಸಚಿವ ಜಮೀರ್ ಅಹ್ಮದ್ ಹಾಜರಾಗಬೇಕಿದ್ದು, ಡಿವೈಎಸ್ಪಿ ಸತೀಶ್ (DYSP Satish) ಅವರಿಂದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ಈವರೆಗೂ ಮೂರು ಬಾರಿ ನೋಟಿಸ್ ನೀಡಿದ್ದರೂ ಸಚಿವ ಜಮೀರ್ ಉತ್ತರ ನೀಡಿರಲಿಲ್ಲ. ಹೀಗಾಗಿ ಅವರಿಗೆ ಸಮನ್ಸ್ ನೀಡಲಾಗಿತ್ತು.
ಇಂದು (ಡಿ.3) ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಡಿವೈಎಸ್ಪಿ ಸೂಚನೆ ನೀಡಿದ್ದರು.ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ಜಮೀರ್ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಈ ಮುನ್ನ ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ.
ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು.ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.ಆ ಮೂಲಕ ಸುಪ್ರೀಂ ಕೋರ್ಟ್ (Supreme court) ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು.
ಆದ್ರೆ ಸುಪ್ರೀಂ ಕೋರ್ಟ್ ಆದೇಶದ ಬಳಿಕೆ ಸಚಿವ ಜಮೀರ್ ಅಹ್ಮದ್ ಖಾನ್ ಇದುವರೆಗೂ ವಿಚಾರಣೆಗೆ ಹಾಜರಾಗಿರಲಿಲ್ಲ. ಆದ್ರೆ ಇಂದು ವಿಚಾರಣೆಗೆ ಕರೆದಿರುವ ತನಿಖಾಧಿಕಾರಿ ಜಮೀರ್ ಹೇಳಿಕೆ ದಾಖಲಿಸಿದ್ದಾರೆ.