ಅಸ್ಸಾಂನಲ್ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ ಅಸ್ಸಾಂ ನಲ್ಲಿ ಗೋಮಾಂಸ ಮಾರಾಟ ಹಾಗೂ ಸೇವನೆಯನ್ನು ನಿಷೇಧಿಸಿ ಅಲ್ಲಿನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ .

ಹೀಗಾಗಿ ಇನ್ಮುಂದೆ ಅಸ್ಸಾಂ ನ ಯಾವುದೇ ರೆಸ್ಟೋರೆಂಟ್ ಅಥವಾ ಹೋಟೆಲ್‌ಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಬಿಜೆಪಿಯ ಗೋಹತ್ಯೆ ವಿರೋಧದ ನಿಲುವನ್ನು ಇದು ಪ್ರಬಲವಾಗಿ ಪ್ರತಿಪಾದಿಸಲಿದ್ದು, ಇನ್ಮುಂದೆ ಅಸ್ಸಾಂನಲ್ಲಿ ಗೋಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕಾನೂನನ್ನು ಬಲಪಡಿಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.