ಒಂದೆಡೆ ಎಚ್.ಡಿ.ಕುಮಾರಸ್ವಾಮಿ, ಮತ್ತೊಂದೆಡೆ ಆರ್.ಆಶೋಕ್ ಮುಖ್ಯಮಂತ್ರಿಯಾಗಲು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅವರಿಗೆ ಆ ಅವಕಾಶ ಸಿಗುವುದಿಲ್ಲ. ಇನ್ನು 5 ವರ್ಷ ನಾವೇ ಅಧಿಕಾರ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಸಿಎಂ ಜನರ ಆಶೀರ್ವಾದ ಇರುವವರೆಗೂ ನಮ್ಮನ್ನು ಯಾರಿಂದಲೂ ಬಗ್ಗಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನವರು ಶಿಗ್ಗಾವಿ ಮತ್ತು ಚನ್ನಪಟ್ಟಣದಲ್ಲಿ ತಮ್ಮ ಮಕ್ಕಳನ್ನು ನಿಲ್ಲಿಸಿ ನೂರಾರು ಕೋಟಿ ಖರ್ಚು ಮಾಡಿದರು ಏನೂ ಪ್ರಯೋಜನವಾಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.
ಕುಮಾರಸ್ವಾಮಿ ಮತ್ತು ಬೊಮ್ಮಾಯಿ ತಾವೇ ಗೆದ್ದ ಕ್ಷೇತ್ರದಲ್ಲಿ ತಮ್ಮ ಮಕ್ಕಳನ್ನು ಗೆಲ್ಲಿಸುವ ಪ್ರಯತ್ನ ಪಟ್ಟರು. ಆದ್ರೆ ಕ್ಷೇತ್ರದ ಜನ ನಮ್ಮನ್ನು ಗೆಲ್ಲಿಸಿದ್ರು. ಹೀಗಾಗಿ ಜನ ಸರ್ಕಾರದ ಪರವಾಗಿದ್ದಾರೆ ಎಂದು ಗೊತ್ತಾಗಿದೆ ಎಂದು ಸಿಎಂ ಹೇಳಿದ್ದಾರೆ.



