ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು.
ಭವಿಷ್ಯದ ದಿನಗಳಲ್ಲಿ ಸುಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ದನಿಯೆತ್ತಿ ಹೋರಾಟ ನಡೆಸುವುದಾಗಿ ಪ್ರತಿಭಟನಾ ನಿರತ ಪಂಚಮಸಾಲಿ ಸಮುದಾಯದ ಬಂಧುಗಳಿಗೆ ಅಭಯ ನೀಡಿದರು.
ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷದ ಉಪ ನಾಯಕರಾದ ಶ್ರೀ ಸಿಸಿ ಪಾಟೀಲ್, ಬಸವರಾಜ್ ಮಟ್ಟಿಮಡು, ಶರಣು ಸಲಗರ್, ಶೈಲೇಂದ್ರ ಬೆಳದಲೆ ಶ್ರೀ ಸಿದ್ದು ಪಾಟೀಲ್ ಅವರು ಸೇರಿದಂತೆ ಪಕ್ಷದ ಶಾಸಕರು, ಸಮುದಾಯದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮಾಜದ ಬಂಧುಗಳು ಉಪಸ್ಥಿತರಿದ್ದರು.