• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವೀರ ಸೇನಾನಿಗಳ ಅವಹೇಳನ ಖಂಡಿಸಿ ಇಂದು ಕೊಡಗು ಬಂದ್‌

ಪ್ರತಿಧ್ವನಿ by ಪ್ರತಿಧ್ವನಿ
December 12, 2024
in Top Story, ಇತರೆ / Others, ಕರ್ನಾಟಕ
0
ವೀರ ಸೇನಾನಿಗಳ ಅವಹೇಳನ ಖಂಡಿಸಿ ಇಂದು ಕೊಡಗು ಬಂದ್‌
Share on WhatsAppShare on FacebookShare on Telegram

ಮಡಿಕೇರಿ : ದೇಶದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಗುರುವಾರ) ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ.

ADVERTISEMENT

ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ಕೇವಲ ಆರು ತಿಂಗಳ ಕಾಲ ಬಾರ್ ಕೌನ್ಸಿಲ್ ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರುಗಳು ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಇಂದು ಸರ್ವಜನಾಂಗದ ಒಕ್ಕೂಟ ಜಿಲ್ಲಾ ಬಂದ್ ಗೆ ಕರೆ ನೀಡಿದೆ.

ಖಾಸಗಿ ಬಸ್‌ ಮಾಲೀಕರ ಸಂಘ, ಆಟೋ ಮಾಲೀಕರು ಮತ್ತು ಚಾಲಕರ ಸಂಘ, ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ವಿವಿಧ ಕೊಡವ ಸಮಾಜಗಳು ಸೇರಿದಂತೆ ಒಟ್ಟು 21 ಕ್ಕೂ ಹೆಚ್ಚು ವಿವಿಧ ಸಂಘ ಸಂಸ್ಥೆಗಳು ಕೊಡಗು ಜಿಲ್ಲಾ ಬಂದ್‌ಗೆ ನಿರ್ಧರಿಸಿವೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧಾಹ್ನ 12 ಗಂಟೆಯವರೆಗೆ ಜಿಲ್ಲಾ ಬಂದ್ ಗೆ ಕರೆ ನೀಡಿವೆ. ಕೊಡಗಿನ ಪ್ರತೀ ಹಳ್ಳಿ ಹಳ್ಳಿಗೂ ಸಂಪರ್ಕ ಕೊಂಡಿಯಾಗಿರುವ ಖಾಸಗಿ ಬಸ್ಸುಗಳ ಸಂಚಾರ ಸ್ಥಗಿತವಾಗಲಿದೆ. ಜೊತೆಗೆ ಜಿಲ್ಲಾ ಛೇಂಬರ್ಸ್ ಆಫ್ ಕಾಮರ್ಸ್ ಸಂಘಟನೆ ಬಂದ್ ಗೆ ಕರೆ ನೀಡಿರುವುದರಿಂದ ಜಿಲ್ಲೆಯ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಲಿದೆ. ಆಟೋಗಳ ಮಾಲೀಕರು ಮತ್ತು ಚಾಲಕರ ಸಂಘವೂ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿರುವುದರಿಂದ ಆಟೋಗಳ ಸಂಚಾರವೂ ಇರುವುದಿಲ್ಲ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು ವೀರ ಸೇನಾನಿಗಳಿಗೆ ಅಪಮಾನಿಸಿದ ವ್ಯಕ್ತಿಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿವೆ.

ಹೊಟೇಲ್, ರೆಸಾರ್ಟ್ ಮಾಲೀಕರ ಸಂಘವೂ ಬಂದ್ಗೆ ಬೆಂಬಲ ಸೂಚಿಸಿರುವುದರಿಂದ ಪ್ರವಾಸೋದ್ಯಮದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ. ಈ ಕುರಿತು ಮಾತನಾಡಿರುವ ಸರ್ವ ಜನಾಂಗಗಳ ಒಕ್ಕೂಟದ ಸಂಚಾಲಕ ರಾಜೀವ್ ಬೋಪಯ್ಯ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಜಾತಿ ಜಾತಿಗಳ ನಡುವೆ ಸಂಘರ್ಷ ತಂದೊಡ್ಡಿ ಅಶಾಂತಿಯನ್ನು ಮೂಡಿಸುವ ಯತ್ನವನ್ನು ಮಾಡಲಾಗುತ್ತಿದೆ. ಇದು ಪದೇ ಪದೇ ನಡೆಯುತ್ತಿರುವುದರಿಂದ ಇನ್ನು ಮುಂದೆ ಇಂತಹ ಯಾವುದೇ ಸಮಾಜ ದ್ರೋಹಿ ಕೆಲಸಗಳು ಆಗದಂತೆ ಅದನ್ನು ತಡೆಯುವುದಕ್ಕಾಗಿ ಸರ್ವ ಜನಾಂಗಗಳ ಒಕ್ಕೂಟವನ್ನು ಅಸ್ಥಿತ್ವಕ್ಕೆ ತರಲಾಗಿದೆ. ಅದರ ಭಾಗವಾಗಿ ಇದೇ 12 ರಂದು ಅಂದರೆ ಗುರುವಾರ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ.

Tags: 21 different organizationsBandh KodaguBar Councilinsulted the brave soldiers.Kariappa and General ThimmaiahKarnataka PoliceMadikerisix months.
Previous Post

ಜಮ್ಮು – ಕಾಶ್ಮೀರ ಹೆದ್ದಾರಿಯಲ್ಲಿ ಐಇಡಿ ಪತ್ತೆ; ತಪ್ಪಿದ ಭಾರೀ ಅನಾಹುತ

Next Post

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ:ವಾರದಲ್ಲೇ 5ನೇ ದುರಂತ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ:ವಾರದಲ್ಲೇ 5ನೇ ದುರಂತ

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!