• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡರ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
December 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ, (ರಾಜ್ಯಸಭೆ):ರಾಜ್ಯಸಭೆ ಸಭಾಪತಿಗಳಾದ ಜಗದೀಪ್ ಧನಕರ್ ಅವರ ವಿರುದ್ಧ ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೀಡಿರುವ ನೋಟಿಸ್ ವಿರುದ್ಧ ಹರಿಹಾಯ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಾಜ್ಯಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಸದಸ್ಯರ ವರ್ತನೆಯನ್ನು ಉಗ್ರವಾಗಿ ಖಂಡಿಸಿದ ಮಾಜಿ ಪ್ರಧಾನಿಗಳು; ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂಸತ್ತಿನ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷಗಳನ್ನು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಂಸದರ ನಡವಳಿಕೆಯನ್ನು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳು; ಸಭಾಪತಿಗಳು ಸದನವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಶೈಲಿಯನ್ನು ಸಮರ್ಥಿಸಿಕೊಂಡರು,

ರಾಜ್ಯಸಭೆಯ ಸಭಾಪತಿಗಳ ವಿರುದ್ಧ ಇಂತಹ ನಿರ್ಣಯವನ್ನು ಮಂಡಿಸಲು ಹೊರಟಿರುವುದು ಇತಿಹಾಸದಲ್ಲಿ ಇದೇ ಮೊದಲು. ಇದು ಒಳ್ಳೆಯ ಸಂಪ್ರದಾಯ ಅಲ್ಲ. ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಮಾಜಿ ಪ್ರಧಾನಿಗಳು ಎಚ್ಚರಿಕೆ ನೀಡಿದರು.

ಸದನದ ಕಾರ್ಯವೈಖರಿಯನ್ನು ಹಾಳು ಮಾಡುವ ಉದ್ದೇಶದಿಂದಲೇ ಕಾಂಗ್ರೆಸ್‌ನ ಕೆಲವು ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ದೇವೇಗೌಡರು; ಇಲ್ಲಿರುವ ಕೆಲ ಸದಸ್ಯರು ಈ ಸದನಧ ಕಲಾಪ ಸುಗಮವಾಗಿ ನಡೆಯಲು ಅಡ್ಡಿ ಮಾಡುತ್ತಿದ್ದಾರೆ. ಕೇವಲ ರಾಜಕೀಯ ಹಿತಾಸಕ್ತಿಗಾಗಿ ಗದ್ದಲ ಸೃಷ್ಟಿಸುತ್ತಿದ್ದಾರೆ ಎಂದು ಅವರು ದೂರಿದರು.

ಮೊದಲ ಕಾಂಗ್ರೆಸ್ ಸದಸ್ಯರು ಇಂತಹ ಕೆಟ್ಟ ಸಂಪ್ರದಾಯವನ್ನು ಆರಂಭ ಮಾಡಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲಿದೆ. ನಾವು ಇದನ್ನು ಸಹಿಸುವುದಿಲ್ಲ ಹಾಗೂ ಇದಕ್ಕೆ ಅವಕಾಶವನ್ನು ಕೊಡಬಾರದು ಎಂದು ಅವರು ದೃಢ ಮಾತುಗಳಲ್ಲಿ ಹೇಳಿದರು.

ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೇರ ಮನವಿ ಮಾಡಿದ ಮಾಜಿ ಪ್ರಧಾನಿಗಳು; ನಿಮ್ಮ ಸದಸ್ಯರು ಸದನದ ಗೌರವ ಹಾಳು ಮಾಡುತ್ತಿದ್ದಾರೆ. ಅವರನ್ನು ತಡೆಯುವ ಜವಾಬ್ದಾರಿ ನಿಮ್ಮದು. ಸಂಸದೀಯ ಸೌಹಾರ್ದತೆಯನ್ನು ಎತ್ತಿಹಿಡಿಯುವುದು ನಿಮ್ಮ ಮತ್ತು ನಿಮ್ಮ ಪಕ್ಷದ ಹೊಣೆಗಾರಿಕೆ ಆಗಿದೆ ಎಂದು ಒತ್ತಾಯ ಮಾಡಿದರು ಹಾಗೂ “ನಾನು, ನನ್ನ ಸ್ನೇಹಿತ ಖರ್ಗೆ ಅವರಿಗೆ ಹೇಳಲು ಬಯಸುತ್ತೇನೆ. ಅವರು ತಮ್ಮ ಸಹೋದ್ಯೋಗಿಗಳು ಈ ರೀತಿ ವರ್ತಿಸಲು ಬಿಡಬಾರದು. ಸದನ ಕಾರ್ಯ ನಿರ್ವಹಿಸಲು ಅವಕಾಶ ನೀಡುವಂತೆ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ” ಎಂದು ದೇವೇಗೌಡ ಹೇಳಿದರು.

ಪ್ರತಿಪಕ್ಷಗಳ ಸದಸ್ಯರ ನಡವಳಿಕೆ ಪ್ರಧಾನಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಎರಡಕ್ಕೂ ಮಾಡಿದ ಅವಮಾನ ಎಂದು ಬಣ್ಣಿಸಿದ ಮಾಜಿ ಪ್ರಧಾನಿಗಳು; ಸದಸ್ಯರು ಪ್ರಧಾನಿಯನ್ನು ಅವಮಾನಿಸುತ್ತಿದ್ದಾರೆ, ಆ ಭರದಲ್ಲಿ ಮಾತ್ರವಲ್ಲದೆ ಪ್ರಜಾಪ್ರಭುತ್ವವನ್ನು ಕೂಡ ಅವಮಾನಿಸುತ್ತಿದ್ದಾರೆ. ಈ ನಡವಳಿಕೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ನನಗೆ ಬಹಳ ನಿರಾಶೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ಪರಸ್ಪರ ಗೌರವ ಮತ್ತು ಸುಗಮ ಕಲಾಪದ ಅಗತ್ಯವನ್ನು ಒತ್ತಿ ಹೇಳಿದ ಮಾಜಿ ಪ್ರಧಾನಿಗಳು; ತಮ್ಮ ಭಾಷಣದಲ್ಲಿ ಸಭಾಪತಿ ಧನಕರ್ ಅವರ ನಿಷ್ಪಕ್ಷಪಾತತೆಯನ್ನು ಪ್ರಸ್ತಾಪಿಸಿ ಕಲಾಪವನ್ನು ಉತ್ತಮವಾಗಿ ನಡೆಸುವ ಅವರ ಭದ್ಧತೆಯನ್ನು ಶ್ಲಾಘಿಸಿದರು. “ನೀವು ಪಕ್ಷಪಾತಿಯಲ್ಲ; ನೀವು ನಿಷ್ಪಕ್ಷಪಾತಿ. ಅವರು ಈ ಸದನದಲ್ಲಿ ಈ ರೀತಿ ವರ್ತಿಸಬಾರದು. ಕೆಲವು ಸದಸ್ಯರು ನಿಮ್ಮನ್ನು ಅವಮಾನಿಸಲು ಉದ್ದೆಗೈಸಿದ್ದಾರೆ” ಎಂದು ಅವರು ಪೀಠವನ್ನು ಉದ್ದೇಶಿಸಿ ಹೇಳಿದರು.

ಕಾಂಗ್ರೆಸ್ ಸಂಸದರಿಗೆ ಎಚ್ಚರಿಕೆ ನೀಡಿದ ಅವರು; ಕಲಾಪಕ್ಕೆ ಅಡ್ಡಿಪಡಿಸುವುದನ್ನು ಕೂಡಲೇ ನಿಲ್ಲಿಸುವಂತೆ ಕಾಂಗ್ರೆಸ್ ಸದಸ್ಯರನ್ನು ಒತ್ತಾಯಿಸಿದರು. “ಸದನದ ಕಲಾಪ ನಿರಾತಂಕವಾಗಿ ನಡೆಯಬೇಕು. ಕೆಲ ಸದಸ್ಯರು ಇಡೀ ವ್ಯವಸ್ಥೆಯನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಅವರು ಎಷ್ಟು ದಿನ ಇದನ್ನು ಮಾಡುತ್ತಾರೆ?” ಎಂದು ಕಿಡಿಕಾರಿದರು.

Tags: (Rajya Sabha):BJPcongress allianceCongress PartyFormer Prime Ministers HD Deve GowdaNew Delhino-confidenceprotested againstRajya Sabha Speaker Jagdeep Dhankar
Previous Post

ಪಂಚಮಶಾಲಿ ಮೀಸಲಾತಿ ಹೋರಾಟ ವಿಚಾರಕ್ಕೆ ಎಂಎಲ್ಸಿ ಹೆಚ್ ವಿಶ್ವನಾಥ್ ಕಿಡಿ

Next Post

ಪಂಚಮಸಾಲಿ ಮೀಸಲಾತಿ ಫೈಟ್‌‌.. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರ ಒಗ್ಗಟ್ಟು ಛಿದ್ರ ಛಿದ್ರ..

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post

ಪಂಚಮಸಾಲಿ ಮೀಸಲಾತಿ ಫೈಟ್‌‌.. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರ ಒಗ್ಗಟ್ಟು ಛಿದ್ರ ಛಿದ್ರ..

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!