• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೈಗಾರಿಕಾ ವಿಕ್ರಮಕ್ಕೆ ಸ್ವಿಫ್ಟ್ ಸಿಟಿ ಹೊಂಗನಸು

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಚಿವ ಎಂ ಬಿ ಪಾಟೀಲ ತುಡಿತ

ADVERTISEMENT

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

Rahul Gandhi: ಸಂವಿಧಾನ ಭಾಷಣದಲ್ಲಿ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ವಾಗ್ದಾಳಿ..! #veersavarkar #bjp #pmmodi

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ. ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು.

ಎಂ ಬಿ ಪಾಟೀಲ
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು

Tags: BangaloreBJPCongress PartyIndustrial HubM B Patilswift cityಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Live Parliament Session:ಸಂಸತ್‌ನಲ್ಲಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ಭಾಷಣ..!.!

Next Post

ಅಭಿಮಾನಿಗಳು & ಕಾರ್ಯಕರ್ತರಿಗೆ HDK ಸಂದೇಶ ! ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಡಿ ಮನವಿ ! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ದಳಪತಿಯ ನಡೆಗೆ ಪಕ್ಷದಲ್ಲಿ ತೀವ್ರ ಅಸಮಾಧಾನ ?! ಚದುರಿ ಹೋಗಲಿದ್ದಾರಾ ಜೆಡಿಎಸ್ ಶಾಸಕರು?!

ಅಭಿಮಾನಿಗಳು & ಕಾರ್ಯಕರ್ತರಿಗೆ HDK ಸಂದೇಶ ! ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಡಿ ಮನವಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada