ಮೈಸೂರು: ಹೆಚ್.ಡಿ. ಕೋಟೆ ಪಟ್ಟಣದ ಚಾಕಹಳ್ಳಿ ಗ್ರಾಮದಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿದೆ. ಸುಮಾರು ಒಂದುವರೆ ವರ್ಷದ ಹುಲಿ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈದ್ಯಾಧಿಕಾರಿಗಳಾದ ಡಾ. ಮುಜಿಬ್, ಡಾ.ರಮೇಶ್ ವೈದ್ಯಕೀಯ ಪರಿಕ್ಷೆ ನಡೆಸಿದ್ದಾರೆ. ಹುಲಿ ಮತ್ತೊಂದು ಹುಲಿಯೊಂದಿಗೆ ಕಾಳಗವಾಗಿದ್ದು, ಕಾಳಗದಲ್ಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಹುಲಿ ಮೃತಪಟ್ಟ ಸ್ಥಳದಲ್ಲಿ ಸುತ್ತಲೂ ನಾಲ್ಕು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ನಾಳೆಯವರೆಗೂ ಪರಿಶೀಲನೆ ನಡೆಸಿ ನಂತರ ಮುಂದಿನ ಕ್ರಮ ವಹಿಸಲಾಗುವುದು ಎಂದು ಅರುಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಯ ಕಳೇಬರ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಈ ಕೂಡಲೇ ಬೋನು ಇಟ್ಟು ಇನ್ನೂಳಿದ ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.