ಗದಗದಲ್ಲಿ (Gadag) ಸಿಎಂ ಸಿದ್ದರಾಮಯ್ಯಗೆ (Cm siddaramaih) ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ನರೇಗಲ್ ರಾಜ್ಯ ಹೆದ್ದಾರಿ ತಡೆದು ಪಂಚಮಸಾಲಿ (Panchamasali) ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದರು.ಹೀಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರರನ್ನು ನರೇಗಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಲಾಕ್ ಮಾಡಿದ್ದಾರೆ.
ರಾಜ್ಯ ಹೆದ್ದಾರಿ ತಡೆಯಲು ಮುಂದಾದ ಪಂಚಮಸಾಲಿ ಸಮಾಜದ ಮುಖಂಡ ಚನ್ನು ಪಾಟೀಲ್ ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹೋರಾಟ ತೀವ್ರಗೊಂಡಿದೆ.