ಬೆಂಗಳೂರು :ಡಿ.13ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ತಂಡಕ್ಕೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಇದೀಗ ಬೆಂಗಳೂರು ಪೊಲೀಸರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧಾರ ಮಾಡಿದ್ದಾರೆ.
ಕಾನೂನು ಸಲಹೆ ಪಡೆದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ತೀರ್ಮಾನಿಸಿದ್ದು, ಈ ಸಂಬಂಧ ಅನುಮತಿ ನೀಡಲು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಮೂಲಕ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಬಿಗ್ ಶಾಕ್ ಕೊಟ್ಟಿದ್ದಾರೆ.