ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿರುವ ಗೋಲ್ಮಾಲ್ ಬಗ್ಗೆ ಹೋರಾಟ ನಡೆಸುತ್ತಿರುವ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna) ಇದೀಗ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ (Cm siddaramaiah) ಅವರ ಪತ್ನಿಗೆ ನೀಡಿರುವ ಅಕ್ರಮ ನಿವೇಶನಗಳ ಹಂಚಿಕೆ ಬಗ್ಗೆ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣ ಇದೀಗ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಮತ್ತೊಂದು ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ (Cm wife parvati) ಅವರಿಗೆ ಹಂಚಿಕೆಯಾಗಿದ್ದ ಅಕ್ರಮ ನಿವೇಶನಗಳ ಬಗ್ಗೆ ದೂರು ನೀಡಿ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣರಿಗೆ, ಈ ಪ್ರಕರಣದಲ್ಲಿ ಸಹಕರಿಸುವಂತೆ ಸಿಎಂ ಪತ್ನಿ ಅವರ ಆಪ್ತರ ಕಡೆಯಿಂದ ಹಣದ ಆಮೇಶ ಒಡ್ಡಲಾಗಿದೆಯಂತೆ.
ಈ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಈ ರೀತಿ ಉಲ್ಲೇಖಿಸಿದ್ದಾರೆ. ಶ್ರೀ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಆಪ್ತ ಸಹಾಯಕ ಎಂದು ಹೇಳಿಕೊಂಡ ಹರ್ಷ ಎಂಬುವವರು, ನನಗೆ ಪರಿಚಿತರಾದ ಶ್ರೀನಿಧಿ ಎಂಬುವವರ ಜೊತೆ ಬಂದು ಪ್ರಕರಣದಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿಕೊಂಡು, ನಾನು ನಿರಾಕರಿಸಿದಾಗ ನನ್ನ ಮನೆಯ ಬಳಿಗೆ ಬಂದು, ನನ್ನ ಮಗ ವಿ.ಕ್ರಿ.ವಿವೇಕನೊಂದಿಗೆ ಮಾತನಾಡಿ ಗಂಗರಾಜುರವರಿಗೆ ಹಣ ಕೊಟ್ಟಿರುವುದಾಗಿ, ನಿಮ್ಮ ತಂದೆಗೂ ಹಣ ಕೊಡುವುದಾಗಿ ಆಮಿಷ ಒಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಹರ್ಷರವರನ್ನು ವಿಚಾರಣೆಗೆ ಒಳಪಡಿಸಿ, ಅವರ ಮೊಬೈಲ್ ಅನ್ನು ವಶಪಡಿಸಿಕೊಂಡು, ಪರಿಶೀಲನೆ ನಡೆಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ.. ಎಂದು ಸುಮಾರು ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.
ಈ ಮುಂಚೆ ಕೂಡ ದೂರುದಾರ ಸ್ನೇಹಮಯಿ ಕೃಷ್ಣ ಅವರ ಮೇಲೆ ಬೇರೆ ಬೇರೆ ಕೇಸ್ ಗಳನ್ನು ದಾಖಲಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಸ್ನೇಹಮಯಿ ಕೃಷ್ಣ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ನಾನು ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದರು.