ಬೆಂಗಳೂರು:ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ.
ಒಟ್ಟು 14,980 ಪೌರಕಾರ್ಮಿಕರ ಕಾಯಂಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಅವುಗಳಲ್ಲಿ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಸುಮಾರು 8000 ಮಹಿಳಾ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.