ಕೋಲಾರ: ಕೋಲಾರದಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ಸರ್ವೇ ನಡೆಯುವ ಹಿನ್ನೆಲೆಯಲ್ಲಿ ಸರ್ವೇ ಮುಂದೂಡಲು ನಡೀತಿದ್ಯಾ ಕೊನೆ ಹಂತದ ಪ್ರಯತ್ನ ..? ಎನ್ನುವ ಪ್ರಶ್ನೆ ಸೃಷ್ಟಿಯಾಗಿದೆ. ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತರು ದಿಡೀರ್ ಕೋಲಾರ ಡಿಸಿಗೆ ಪತ್ರ ಬರೆದಿದ್ದಾರೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣದಲ್ಲಿ ರಮೇಶ್ ಕುಮಾರ್ ಬೆನ್ನಿಗೆ ಸರ್ಕಾರ ಹಾಗೂ ಕಂದಾಯ ಇಲಾಖೆ ನಿಂತಿದ್ಯಾ..? ಅನ್ನೋ ಅನುಮಾನ ಮೂಡುತ್ತಿದೆ. ಹೈಕೋರ್ಟ್ ಆದೇಶದಂತೆ ಇವತ್ತು ಸರ್ವೆ ಕಾರ್ಯ ನಡೆಯಬೇಕಿತ್ತು. ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇಗೆ ಹೋಗದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಕೋಲಾರ ಅರಣ್ಯಾಧಿಕಾರಿಗೆ ನೋಟಿಸ್ ನೀಡುವ ಅಧಿಕಾರವಿಲ್ಲ ಎಂದು ಉಲ್ಲೇಖಿಸಿ ಪತ್ರ ಬರೆದಿದ್ದಾರೆ. DFO ಸರ್ವೇ ನೋಟಿಸ್‌ನಿಂದ ಹೈಕೋರ್ಟ್ ಆದೇಶ ಉಲ್ಲಂಘನೆ ಎಂದು ಉಲ್ಲೇಖ ಮಾಡಿದ್ದಾರೆ. ಜನವರಿ 2 ರಂದು ಸರ್ವೆ ಕಾರ್ಯಕ್ಕೆ ತೆರಳುವಂತೆ ಕಂದಾಯ ಇಲಾಖೆಗೆ ಸೂಚನೆ ಕೊಡಲಾಗಿದೆ. ನಾಳಿನ ಸರ್ವೆ ಕಾರ್ಯಕ್ಕೆ ರಮೇಶ್ ಕುಮಾರ್ ಅನುಪಸ್ಥಿತಿ ಸಾಧ್ಯತೆ ಇದೆ. ಹೀಗಾಗಿ ಸರ್ವೇ ಬೇಡ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಸರ್ವೇ ಕಾರ್ಯ ಮಾಡ್ತೀವಿ ಎಂದು ಅರಣ್ಯಾಧಿಕಾರಿ ಏಡುಕೊಂಡಲು ಮಾಹಿತಿ ನೀಡಿದ್ದಾರೆ. ಕೋಲಾರ ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಸರ್ವೇಗೆ ಸಿದ್ದತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದಿನ ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಕಾರ್ಯಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಜಿನಗಲಕುಂಟೆ ಸರ್ವೇ ನಂ 1 & 2 ರಲ್ಲಿ 61.39 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆಯ ಸರ್ವೇ ಬಂದೋಬಸ್ತ್‌ಗೆ 50ಕ್ಕು ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಎಎಸ್‌ಪಿ, ಡಿವೈಎಸ್‌ಪಿ, 2 ಸರ್ಕಲ್ ಇನ್ಸ್‌ಪೆಕ್ಟರ್, 6 ಸಬ್ ಇನ್ಸ್‌ಪೆಕ್ಟರ್ ನಿಯೋಜನೆ ಮಾಡಲಾಗಿದೆ. ಇಂದಿನ ಸರ್ವೇ ನಡೆಯುವ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಸರ್ವೇ ಕಾರ್ಯಕ್ಕೆ ಹಾಜರಾಗಲು ರಮೇಶ್ ಕುಮಾರ್‌ಗೆ ನೋಟಿಸ್ ಜಾರಿ ಮಾಡಿದ್ದು, ಜಿಲ್ಲಾ ಅರಣ್ಯಾಧಿಕಾರಿಯಿಂದ ಖುದ್ದು ಹಾಜರಿರಲು ನೋಟಿಸ್ ಜಾರಿ ಮಾಡಲಾಗಿದೆ.