ಪಂಜಾಬ್‌ನ ಮೊಹಾಲಿಯ ಸೊಹಾನಾ ಪ್ರದೇಶದಲ್ಲಿ ಶನಿವಾರ ಸಂಜೆ ಬಹುಮಹಡಿ ಕಟ್ಟಡ ಕುಸಿದು ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ದಾರುಣ ಘಟನೆ ನಡೆದಿದೆ.ರಕ್ಷಣಾ ತಂಡಗಳು ಪ್ರಸ್ತುತ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ, ಆದರೆ ಕುಸಿತದ ಸಮಯದಲ್ಲಿ ಎಷ್ಟು ಜನರು ಒಳಗೆ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮೊಹಾಲಿ ಎಸ್ ಎಸ್ ಪಿ ದೀಪಕ್ ಪರೀಕ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕಟ್ಟಡ ಕುಸಿತದಿಂದ ಅವಶೇಷಗಳಡಿ ಎಷ್ಟು ಜನರು ಸಿಲುಕಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.ಸ್ಥಳದಲ್ಲಿ ಎನ್ ಡಿಆರ್ ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.
Deeply pained to know about the tragic building collapse in Mohali. Praying for the safety of those affected and swift rescue efforts.
— Satnam Singh Sandhu (@satnamsandhuchd) December 21, 2024
Let’s all support the authorities in their relief operations 🙏🏻 pic.twitter.com/Sd3SCZjUW3
ಪಕ್ಕದ ಕಟ್ಟಡದ ನೆಲಮಾಳಿಗೆಯಲ್ಲಿ ಕೆಲಸ ನಡೆಯುತ್ತಿತ್ತು. ಈ ವೇಳೆ ಕಟ್ಟಡ ಕುಸಿದಿದೆ. ಕಟ್ಟಡದ ಮೂರು ಮಹಡಿಗಳಲ್ಲಿ ಜಿಮ್ ಕಾರ್ಯನಿರ್ವಹಿಸುತ್ತಿತ್ತು. ಏಳರಿಂದ ಎಂಟು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.