• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.!

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ADVERTISEMENT

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು  ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು ಭಾಗಿಯಾಗಲಿದ್ದಾರೆ.     ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು  ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

ಕ್ರೀಡಾಕೂಟ ಲಾಂಛನ ಬಿಡುಗಡೆ: ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.ಕ್ರೀಡಾಕೂಟದ ಲೋಗೋದಲ್ಲಿನ  ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Tags: Additional Chief Secretary LK Atiq.bengaluruChief Minister's Political SecretariesCM SiddaramaiahCM Siddaramaiah released the logo of Karnataka Games-2025.Congress PartyEnergy Minister KJ GeorgeHome Minister Dr G ParameshwarJanuary 17Karnataka Games-2025Karnataka Olympic Association President K. GovindarajuMangalore-Udupi Districts.
Previous Post

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್

Next Post

ಥಿಯೇಟರ್‌ ನಲ್ಲಿ ಕಾಲ್ತುಳಿತಕ್ಕೆ ಬಲಿಯಾದ ರೇವತಿ ಕುಟುಂಬಕ್ಕೆ ಮತ್ತೆ 50 ಲಕ್ಷ ನೆರವು

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಥಿಯೇಟರ್‌ ನಲ್ಲಿ ಕಾಲ್ತುಳಿತಕ್ಕೆ ಬಲಿಯಾದ ರೇವತಿ ಕುಟುಂಬಕ್ಕೆ ಮತ್ತೆ 50 ಲಕ್ಷ ನೆರವು

ಥಿಯೇಟರ್‌ ನಲ್ಲಿ ಕಾಲ್ತುಳಿತಕ್ಕೆ ಬಲಿಯಾದ ರೇವತಿ ಕುಟುಂಬಕ್ಕೆ ಮತ್ತೆ 50 ಲಕ್ಷ ನೆರವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada