
ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ದುಷ್ಕರ್ಮಿಯೊಬ್ಬ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಹೀನ ಕೃತ್ಯ ಡಿಸೆಂಬರ 14 ರಂದು ನಡೆದಿದ್ದು ಸಂತ್ರಸ್ಥ ಯುವತಿಯು ತನ್ನ ಸಂಬಂಧಿಕರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಕುಟುಂಬಸ್ಥರೊಂದಿಗೆ ಬಂದಿದ್ದಳು.ಆಗ ಆರೋಪಿಯು ಆಕೆಯನ್ನು ಶಾಲಾ ಕೊಠಡಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಆರೋಪಿಯನ್ನು ಸಮೀಪದ ನಾವೂರ ನಿವಾಸಿ ಜಯಂತ ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಹಾಗೂ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೋಲೀಸರು ತಿಳಿಸಿದ್ದಾರೆ.