• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು.

ADVERTISEMENT

ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು *ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್* ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.756 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸರಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಚಿವರು:

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಂಬಿನಿ ಮಿಡಿದಿದ್ದಾರೆ.

ಅಪಘಾತದಲ್ಲಿ ಯೋಧರು ಸಾವನ್ನಪ್ಪಿದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ರಾಮಚಂದ್ರ ಮುಂತಾದವರು ಜತೆಯಲ್ಲಿ ಇದ್ದರು.

Tags: Alibaba and Congress of 40 thievesBelgaumBJPfake congress.Former minister C.S. Puttarajuformer MLA Dr. K. AnnadaniMandyaMinister paid tribute to the warriorsMLA HT ManjunathProliferation of fake GandhisRamachandra .Union minister HD Kumaraswamy
Previous Post

ಹೆಬ್ಬೆಟ್ಟು ಗೃಹ ಸಚಿವರು ಎಂದು ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

Next Post

ಸಿಲಿಂಡರ್ ಸ್ಫೋಟಗೊಂಡ ಕುಟುಂಬಕ್ಕೆ ಸಂತೋಷ್ ಲಾಡ್ ಐದುಲಕ್ಷ ಪರಿಹಾರ

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post

ಸಿಲಿಂಡರ್ ಸ್ಫೋಟಗೊಂಡ ಕುಟುಂಬಕ್ಕೆ ಸಂತೋಷ್ ಲಾಡ್ ಐದುಲಕ್ಷ ಪರಿಹಾರ

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!