ಬೆಳಗಾವಿ (ಬೀದರ್):ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಯುವಕ ಸಚಿನ್ ಪಾಂಚಾಳರ ಸಾವು ದುರದೃಷ್ಟಕರವಾದುದು, ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ .ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಹೇಳಿದರು.
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಈ ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್ ನೋಟ್ ನಲ್ಲಿ ಇನ್ನೊಂದು ಬಗೆಯ ವಿಷಯಗಳು ಕಂಡು ಬರುತ್ತವೆ.ಈಗಾಗಲೇ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂದಿದ್ದಾರೆ, ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ ಮಾಡಲಿದ್ದಾರೆ.
ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ,ಈ ಹಿಂದೆಯೂ ನನ್ನ ಮೇಲೆ ನಿರಾಧರ ಆರೋಪ ಮಾಡಿದ್ದರು,ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ.ಬಿಜೆಪಿಯವರು ಅ ಪ್ರಯತ್ನ ಮುಂದುವರೆಸುತ್ತಲೇ ಇರಲಿ.ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ.
ಘಟನೆ ಕುರಿತಂತೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ನನಗೂ ಈಗಷ್ಟೇ ವಿಚಾರ ತಿಳಿಯಿತು. ತಪ್ಪಿತಸ್ಥರು ಕಾಂಗ್ರೆಸ್ ಪಕ್ಷದವರೇ ಆಗಿರಲಿ, ನನ್ನ ಆಪ್ತನೇ ಆಗಿರಲಿ. ತನಿಖೆ ನಡೆಸಲಾಗುವುದು. ಇದರಲ್ಲಿ ಯಾವುದೇ ಯಾವುದೇ ಮುಚ್ಚುಮರೆ ಇಲ್ಲ.
ತನಿಖೆಯಿಂದ ಸತ್ಯಾಸತ್ಯತೆ ಹೊರಗೆ ಬರಲಿ. ಸಮಗ್ರ ತನಿಖೆಗೆ ಆದೇಶಿಸುವಂತೆ ನಾನೇ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ಯಾರ ಹೆಸರನ್ನು ಆರೋಪಿಸಲಾಗಿದೆಯೋ ಅವರು ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಪೊರೇಟರ್ ಆಗಿದ್ದವರು ಎಂಬುದು ನಿಜ” ಎಂದು ಹೇಳಿದ್ದಾರೆ.