• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು; ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು” ಎಂದರು.

“ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು” ಎಂದು ಹೇಳಿದರು.

“ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

“ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು” ಎಂದು ತಿಳಿಸಿದರು.

ಅಂತಿಮ ದರ್ಶನಕ್ಕಾಗಿ ದೆಹಲಿಗೆ ಪ್ರಯಾಣ:ನೀವು ಸಹ ದೆಹಲಿಗೆ ತೆರಳುವಿರಾ ಎಂದು ಕೇಳಿದಾಗ, “ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು” ಎಂದು ಹೇಳಿದರು.

ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು ಸಿಂಗ್, “ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು” ಎಂದು ಸ್ಮರಿಸಿದರು.

“ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್ ಅವರು. ಅವರ ಆಡಳಿತ ಕಾಲದಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು” ಎಂದರು.

“‘ಗಾಂಧಿ ಭಾರತ’ ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

Tags: A week of mourning in the state:BelgaumCongress PartyConvention cancelledDCM DK ShivakumarJai BapuJai BheemJai Constitutional.manmohan singh death
Previous Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

Next Post

ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ; ಹೆಚ್.ಡಿ.ಕುಮಾರಸ್ವಾಮಿ ಕಳವಳ.

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post

ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ; ಹೆಚ್.ಡಿ.ಕುಮಾರಸ್ವಾಮಿ ಕಳವಳ.

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!