• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ,

ಪ್ರತಿಧ್ವನಿ by ಪ್ರತಿಧ್ವನಿ
December 29, 2024
in Top Story, ಇತರೆ / Others, ಕರ್ನಾಟಕ, ಕ್ರೀಡೆ
0
ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ,
Share on WhatsAppShare on FacebookShare on Telegram

ಬೆಂಗಳೂರು:”ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಈ ಕ್ರೀಡೆಯನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ ಮಾಜಿ ಆಟಗಾರ ಸಯ್ಯದ್ ಕಿರ್ಮಾನಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಆತ್ಮ ಚರಿತ್ರೆ “ಸ್ಟಂಪಡ್ – ಲೈಫ್ ಬಿಯಾಂಡ್ ಅಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್” ಬಿಡುಗಡೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. ಒಟ್ಟಾರೆ ಅವರು ಹೇಳಿದ್ದಿಷ್ಟು;

ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಹೀಗಾಗಿ ಕ್ರೀಡಾ ಚಟುವಟಿಕೆಗಳಿಂದ ಅವರನ್ನು ದೂರ ಇಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ನಾನೊಬ್ಬ ರಾಜಕಾರಣಿ, ಆದರೂ ಕಿರ್ಮಾನಿ ಅವರು ಈ ಕಾರ್ಯಕ್ರಮಕ್ಕೆ ನನಗೆ ಏಕೆ ಆಹ್ವಾನ ನೀಡಿದರೋ ಗೊತ್ತಿಲ್ಲ.

ಕಿರ್ಮಾನಿ ಅವರದ್ದು ಅತ್ಯುತ್ತಮ ವ್ಯಕ್ತಿತ್ವ:ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ನಿಮಗೆ ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ.

ಕಿರ್ಮಾನಿ ಅವರು ಕೇವಲ ಕ್ರಿಕೆಟ್ ಪ್ರತಿಭೆಯಷ್ಟೇ ಅಲ್ಲ, ಅತ್ಯುತ್ತಮ ವ್ಯಕ್ತಿತ್ವ ಇರುವವರು. ಕರ್ನಾಟಕ ಪ್ರತಿನಿಧಿಸುವ ಆಟಗಾರನಾಗಿ ಭಾರತೀಯ ಕ್ರಿಕೆಟ್ ಗೆ ದೊಡ್ಡ ಕೊಡುಗೆ ನೀಡಿದವರು ಕಿರ್ಮಾನಿ. ಶುದ್ಧ ಹೃದಯ ವಿಶ್ವದ ಶ್ರೇಷ್ಠ ದೇವಾಲಯ ಎಂದು ಹೇಳುತ್ತಾರೆ. ಕಿರ್ಮಾನಿ ಅವರು ಇಂತಹ ಶುದ್ಧ ಹೃದಯ ಹಾಗೂ ಮುಗುಳ್ನಗೆ ಹೊಂದಿರುವ ಹೃದಯವಂತ. ಇಂತವರು ಜಗತ್ತಿನಲ್ಲಿ ಬಹಳ ಅಪರೂಪ.

ನಾನು ಕಿರ್ಮಾನಿ ಅವರ ಅಭಿಮಾನಿ,ನಾನಿಲ್ಲಿ ಡಿಸಿಎಂ ಆಗಿ ಬಂದಿಲ್ಲ. ಕಿರ್ಮಾನಿ ಅವರ ಅಭಿಮಾನಿಯಾಗಿ ಬಂದಿದ್ದೇನೆ. ನಾನು ಶಾಲೆಯಲ್ಲಿದ್ದಾಗ, ಚಂದ್ರಶೇಖರ್, ಜಿ.ಆರ್. ವಿಶ್ವನಾಥ್ ಹಾಗೂ ಕಿರ್ಮಾನಿ ಅವರ ಅಭಿಮಾನಿಯಾಗಿದ್ದೆ. ನೀವೆಲ್ಲರೂ ಸೇರಿ ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆಪಡುವಂತೆ ಸಾಧನೆ ಮಾಡಿದ್ದೀರಿ. ಇವರ ಜತೆಗೆ ಚಂದ್ರಶೇಖರ್, ಬ್ರಿಜೇಶ್ ಪಟೇಲ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಸೇರಿದಂತೆ ಅನೇಕರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕೆಎಸ್ ಸಿಎ ಕಾರ್ಯದರ್ಶಿಯಾಗಿದ್ದ ನಾಗರಾಜ್ ಅವರ ಪುತ್ರ ಹಾಗೂ ನಾನು ಒಂದೇ ಶಾಲೆಯಲ್ಲಿ ಓದುತ್ತಿದ್ದೆ. ಭಾರತ ಪಾಕಿಸ್ತಾನ ಪಂದ್ಯಗಳ ಟಿಕೆಟ್ ಪಡೆಯುತ್ತಿದ್ದೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಕೆಎಸ್ ಸಿಎಗೆ ಪತ್ರ ಬರೆದು ನೂರಾರು ಟಿಕೆಟ್ ಪಡೆದು ನಮ್ಮ ಹುಡುಗರಿಗೆ ಹಂಚಿ ವಿದ್ಯಾರ್ಥಿ ನಾಯಕನಾಗಿದ್ದೆ. ಅಲ್ಲಿಂದ ನಾನು ಸುಮಾರು 10 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದೇನೆ.

ನೀವೆಲ್ಲರೂ ದೇಶಕ್ಕೆ ಕೊಡುಗೆ ನೀಡಿದ್ದೀರಿ. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಧ್ಯಕ್ಷರಾಗುವಂತೆ ನಾರಾಯಣಸ್ವಾಮಿ ಅವರಿಗೆ ಹೇಳಿದ್ದೆವು. ಅವರು ನಮ್ಮ ಮನವಿ ಒಪ್ಪಿ ಆ ಜವಾಬ್ದಾರಿ ವಹಿಸಿಕೊಂಡರು. ಆಗ ರತನ್ ಟಾಟಾ ಅವರನ್ನು ಭೇಟಿ ಮಾಡಬೇಕಾಯಿತು. ಆಗ ಅವರು ಒಂದು ಮಾತು ಹೇಳಿದರು. ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ದೂರ ಸಾಗಬೇಕಾದರೆ ಎಲ್ಲರೊಟ್ಟಿಗೆ ಸೇರಿ ಸಾಗಿ ಎಂದು ಹೇಳಿದರು. ಇದು ಕ್ರಿಕೆಟ್ ಗೂ ಅನ್ವಯವಾಗುತ್ತದೆ. ಎಲ್ಲಾ ಆಟಗಾರರು ಒಗ್ಗಟ್ಟಾಗಿ ಸಾಗಿದರೆ ಮಾತ್ರ ತಂಡ ತನ್ನ ಗುರಿ ಮುಟ್ಟುತ್ತದೆ.

ಆಗಿನ ಕಾಲದ ಆಟಗಾರರು ಈಗಿನ ಕಾಲದಂತೆ ಅತ್ಯುತ್ತಮ ತರಬೇತಿ ಕೇಂದ್ರಗಳನ್ನು ಹೊಂದಿರಲಿಲ್ಲ. ಆದರೂ ದೊಡ್ಡ ಮಟ್ಟಕ್ಕೆ ಬೆಳೆದು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಪ್ರತಿಭೆ ಇದ್ದರೆ ಉನ್ನತ ಸ್ಥಾನಕ್ಕೆ ಏರುತ್ತೇವೆ, ಆದರೆ ಆ ಸ್ಥಾನವನ್ನು ಕಾಯ್ದುಕೊಳ್ಳಬೇಕಾದರೆ ವ್ಯಕ್ತಿತ್ವ ಬಹಳ ಮುಖ್ಯ. ಇದಕ್ಕೆ ಕಿರ್ಮಾನಿ ಉತ್ತಮ ಉದಾಹರಣೆ. ಇಲ್ಲಿರುವ ಆಟಗಾರರೆಲ್ಲರೂ ಉತ್ತಮ ಬಾಂಧವ್ಯ ಹೊಂದಿದ್ದೀರಿ.

ಕಪಿಲ್ ದೇವ್ ಅವರು ಹೇಳಿದಂತೆ, ಅನುಭವದ ಮುಂದೆ ಬೇರೇನೂ ಇಲ್ಲ. ಅನುಭವ ವ್ಯಕ್ತಿಯನ್ನು ಪಕ್ವವಾಗಿಸುತ್ತದೆ. ನಿಮ್ಮ ನಡುವಣ ಬಾಂಧವ್ಯ ನೀರಿನಂತೆ. ಅದಕ್ಕೆ ಬಣ್ಣ, ರುಚಿ ಇಲ್ಲ. ಆದರೂ ಅದು ಬಹಳ ಮುಖ್ಯ. ನೀವು ಯಾವುದೇ ತಲೆಮಾರಿನವರಾಗಿರಿ, ಯಾವುದೇ ವಯೋಮಾನದವರಾಗಿರಿ, ಈ ಕ್ಷೇತ್ರದಲ್ಲಿ ನಿಮ್ಮ ಕೊಡುಗೆ ಹಾಗೂ ನೆನಪು ನಮಗೆ ಮಾದರಿಯಾಗಿದೆ.

ಕಿರ್ಮಾನಿ ಅವರು ನನಗೆ ಅತ್ಯುತ್ತಮ ಸ್ನೇಹಿತರು. ಇತ್ತೀಚೆಗೆ ನಾನು, ಕಿರ್ಮಾನಿ ಹಾಗೂ ಫಾರೂಕ್ ಅಬ್ದುಲ್ಲಾ ಅವರು ಒಟ್ಟಿಗೆ ಸೇರಿದ್ದೆವು. ಅವರು ಹೃದಯ ಬಹಳ ಶುದ್ಧವಾಗಿದ್ದು, ಸದಾ ಹಸನ್ಮುಖಿ. ಅವರು ಹೀಗೆ ಸದಾ ನಗುತ್ತಿರಲಿ. ಅವರು ತಮ್ಮ ನೂರನೇ ವರ್ಷದ ಜನ್ಮದಿನ ಆಚರಿಸುವಂತಾಗಲಿ. ಕಿರ್ಮಾನಿ ಅವರೇ ನಿಮ್ಮ ಜತೆ ಹುಟ್ಟಿದವರು, ಬಂಧುಗಳು ಮಾತ್ರ ನಿಮ್ಮ ಕುಟುಂಬವಲ್ಲ. ಇಲ್ಲಿರುವ ನಾವೆಲ್ಲರೂ ನಿಮ್ಮ ಕುಟುಂಬದವರು. ನೀವು 88 ಟೆಸ್ಟ್ ಪಂದ್ಯಗಳನ್ನಾಡಿದ್ದೀರಿ. 100 ಪಂದ್ಯಗಳನ್ನು ಆಡಬೇಕಿತ್ತು.

ಕ್ರೀಡೆಯಲ್ಲಿ ನೀವು ಬೇರೆ ಬೇರೆ ರೀತಿಯಲ್ಲಿ ಇನ್ನಷ್ಟು ಸೇವೆ ಸಲ್ಲಿಸಿ. ನಿಮ್ಮ ಮುಂದಿನ ಬದುಕು ಮತ್ತಷ್ಟು ಯಶಸ್ವಿಯಾಗಲಿ. ನಾನು ಕಿರ್ಮಾನಿ ಅಭಿಮಾನಿ ಹಾಗೂ ಕೆಎಸ್ ಸಿಎ ಸದಸ್ಯನಾಗಿ ಇಲ್ಲಿಗೆ ಬಂದಿದ್ದೇನೆ. ನಾನು ₹2 ಸಾವಿರ ನೀಡಿ ಕೆಎಸ್ ಸಿಎ ಸದಸ್ಯತ್ವ ಪಡೆದಿದ್ದೆ. ಆದರೂ ಆಡಳಿತ ಮಂಡಳಿಯಲ್ಲಿ ರಾಜಕಾರಣಿಗಳು ಇಲ್ಲದಿರುವುದು ನನಗೆ ಸಂತೋಷವಿದೆ.

75 ವಸಂತಗಳನ್ನು ಪೂರೈಸಿರುವ ನಿಮಗೆ ದೇವರು ಹೆಚ್ಚಿನ ಆಯಸ್ಸು ನೀಡುತ್ತಾನೋ ಇಲ್ಲವೋ ಗೊತ್ತಿಲ್ಲ. ಕಿರ್ಮಾನಿ ಅವರ ನೆಪದಲ್ಲಿ ಕ್ರಿಕೆಟ್ ಲೋಕದ ದಿಗ್ಗಜರು ಒಂದೇ ಕಡೆ ಸೇರಿರುವುದನ್ನು ನೋಡುವುದಕ್ಕೆ ಸಂತಸವಾಗುತ್ತಿದೆ”,

Tags: Anil kumbleBangaloreBrijesh PatelChandrasekharCricketDCM D.K.Sivakumar Advice.DCM DK ShivakumarI'm a fan of Kirmani.Keep the game of cricket away from the politiciansKirmani possesses both these qualities.Rahul Dravid
Previous Post

ಚಳಿಗಾಲದಲ್ಲಿ ಈ ಫೇಸ್ ಮಾಸ್ಕ್ ಗಳನ್ನು ತಪ್ಪಿಯು ಬಳಸಬೇಡಿ.!

Next Post

ದಕ್ಷಿಣ ಕೊರಿಯಾದಲ್ಲಿ ಜೆಜು ಏರ್ ವಿಮಾನ ಲ್ಯಾಂಡಿಂಗ್‌ನಲ್ಲಿ ಪತನಗೊಂಡು 179 ಮಂದಿ ಸಾವು

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ದಕ್ಷಿಣ ಕೊರಿಯಾದಲ್ಲಿ ಜೆಜು ಏರ್ ವಿಮಾನ ಲ್ಯಾಂಡಿಂಗ್‌ನಲ್ಲಿ ಪತನಗೊಂಡು 179 ಮಂದಿ ಸಾವು

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada