• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ.‌

ಪ್ರತಿಧ್ವನಿ by ಪ್ರತಿಧ್ವನಿ
January 1, 2025
in Top Story, ಇತರೆ / Others, ಕರ್ನಾಟಕ
0
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ.‌
Share on WhatsAppShare on FacebookShare on Telegram

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”.ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.

ADVERTISEMENT

ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ರಾಜಕುಮಾರ”, “ಜೇಮ್ಸ್”, “ಆರೆಂಜ್”, “ಕರಟಕ ದಮನಕ” ದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

“ಬಲರಾಮನ ದಿನಗಳು” 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ.ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

“ಅಟ್ಟಕತ್ತಿ”, ” ಕಾಲ”, “ಕಬಾಲಿ”, “ಭೈರವ”, “ದಸರಾ”, “ಕಲ್ಕಿ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ.

ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌

ಹೀಗೆ ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಹಾಗೂ ಆರಂಭದಿಂದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ “ಬಲರಾಮನ ದಿನಗಳು” ಚಿತ್ರದ ಕುರಿತು ಮತ್ತಷ್ಟು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಶ್ರೇಯಸ್ ತಿಳಿಸಿದ್ದಾರೆ.

Tags: "Aa Dagiya""Attakathi""Bhairava""Kaala""Kabali"1980sdasaradirected by KM ChaitanyaJanuary 15Jayaram and ShreyasKalkiPadmavati Films.Prabhakar's 25th film.Priya Anand is the heroine of TigerTiger Vinod Prabhakar's filmVinod Prabhakar's 'Balaram's Days'.
Previous Post

ಇದು ರಾಜಕೀಯ ಪ್ರೇರಿತ ಆರೋಪ :ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ "31 DAYS" ಚಿತ್ರದ ಒಪೇರ ಸಾಂಗ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!