• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೈಂಗಿಕ ದೌರ್ಜನ್ಯ ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others, ಕರ್ನಾಟಕ
0
ಲೈಂಗಿಕ ದೌರ್ಜನ್ಯ  ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ
Share on WhatsAppShare on FacebookShare on Telegram

ತುಮಕೂರು: ತಮ್ಮ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.

ADVERTISEMENT

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.

ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ.ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.

ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶುಕ್ರವಾರ ರಾತ್ರಿ ಬಂಧಿಸಲಾಗಿದೆ.ಆರಂಭಿಕ ಪ್ರಕ್ರಿಯೆ ಮುಗಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.ಈ ಬಗ್ಗೆ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದು, ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

Tags: complaint of sexual assault victimcrimeCriticismDySP arrestedMadhugiri DySP A. Ramachandrappasexually assaulting a womanSuperintendent of Police KV AshokVideo went viral on social media.
Previous Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್

Next Post

ನಾನು ನನಗಾಗಿ ಶೇಷಮಹಲ್‌ ನಿರ್ಮಿಸಲಿಲ್ಲ; ಬಡವರಿಗೆ 4 ಕೋಟಿ ಮನೆ ಕೊಟ್ಟೆ ;ಮೋದಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ನಾನು ನನಗಾಗಿ ಶೇಷಮಹಲ್‌ ನಿರ್ಮಿಸಲಿಲ್ಲ; ಬಡವರಿಗೆ 4 ಕೋಟಿ ಮನೆ ಕೊಟ್ಟೆ ;ಮೋದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada