• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರೋಪ ಮಾಡಿದರೆ ಸಾಬೀತು ಮಾಡಬೇಕು:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 5, 2025
in Top Story, ಇತರೆ / Others, ಕರ್ನಾಟಕ
0
ಆರೋಪ ಮಾಡಿದರೆ ಸಾಬೀತು ಮಾಡಬೇಕು:ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ:ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ:ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ದ: ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.

ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜಕೀಯ ಚರ್ಚೆ ನಡೆದಿಲ್ಲ:ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.ಮಾರ್ಚ್ ನಲ್ಲಿ ಬಜೆಟ್ ಮಂಡನೆ:ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.

Tags: CM Siddaramaiah‌Congress PartyDavangereIf you make an allegationOpposition parties should not make baseless allegations.Supreme Court said that internal reservationWe are ready to conduct election.you must prove it
Previous Post

ಸಂಕ್ರಾಂತಿ ನಂತರ ಸರ್ಕಾರ ಪತನ ವಿಚಾರ – ವಿಜಯೇಂದ್ರಗೆ ತಾಕತ್ತು..ದಮ್ಮು ಇದ್ರೆ…?! ಬಿವೈವಿ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ! 

Next Post

ಬಿಜೆಪಿವರಿಗೆ ಸಂವಿಧಾನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ..!

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಬಿಜೆಪಿವರಿಗೆ ಸಂವಿಧಾನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ..!

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!