• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram
  • ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ
  • ಕೆಇಬಿ ಇಂಜಿನಿಯರ್ ಗಳ ಸಂಘದ ವಜ್ರಮಹೋತ್ಸವ ಉಪನ್ಯಾಸ, ತಾಂತ್ರಿಕ ದಿನಚರಿ ಬಿಡುಗಡೆ

ಬೆಂಗಳೂರು, ಜ. 6, 2025: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ADVERTISEMENT

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.

“ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ”, ಎಂದು ಹೇಳಿದರು.

ಕುಸುಮ್ ಯೋಜನೆ ತ್ವರಿತಗೊಳಿಸಿ:
“ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ. ಆದ್ದರಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಹೆಚ್ಚು ಆದ್ಯತೆ ನೀಡಬೇಕು”, ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಮನವಿ ಮಾಡಿದರು.

ಇಂಧನ ಶೇಖರಣೆಗೆ ಆದ್ಯತೆ:
“ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದ್ದು, ಇದಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ”, ಎಂದು ತಿಳಿಸಿದರು.

ಸೆಸ್ಕ್ ಅಧ್ಯಕ್ಷ ಎ.ರಮೇಶ್ ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಸzಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ., ಕೆಇಬಿ ಎಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags: BJPCongress PartyGeorgeK J Georgek j george newsK. J. GeorgeKJ Georgekj george congresskj george edkj george latest newskj george ministerkj george mlakj george newskj george sonkj george speechminister kj georgemla kj georgepower minister kj georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಸೂಚನೆ.

Next Post

ಖಾತಾ ರಿಜಿಸ್ಟರ್‌ ಮಾಡಿಸುಕೊಳ್ಳೊರಿಗೆ ಸಿಹಿ ಸುದ್ಧಿ ಕೊಟ್ಟ ಸಿ ಎಂ ಸಿದ್ದರಾಮಯ್ಯ..

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಖಾತಾ ರಿಜಿಸ್ಟರ್‌ ಮಾಡಿಸುಕೊಳ್ಳೊರಿಗೆ ಸಿಹಿ ಸುದ್ಧಿ ಕೊಟ್ಟ ಸಿ ಎಂ ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada