ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ,ಮತದಾನ ಮತ್ತು ಮಠ ಎಣಿಕೆಯ ದಿನಾಂಕ ಪ್ರಕಟ ಮಾಡಿದೆ.

ಇಂದಿನಿಂದಲೇ ದೆಹಲಿಯಲ್ಲಿ ನೀತಿ ಸಂಹಿತೆ ಜಾರಿಯಾಗಲಿದ್ದು, ಜನವರಿ 10 ರಿಂದ 17ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರುತ್ತದೆ. ಒಂದೇ ಹಂತದಲ್ಲಿ ದೆಹಲಿಯ ಎಲ್ಲಾ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಫೆಬ್ರವರಿ 5 ರಂದು ದೆಹಲಿಯ ಎಲ್ಲಾ 70 ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಹೊರಬೀಳಲಿದೆ. ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ರಾಜಕೀಯ ಅಖಾಡ ರಂಗೇರಿದೆ.






