• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗೆ ಮನವಿ:ಸಚಿವ ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನವದೆಹಲಿ:ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕೇಂದ್ರ ಸಚಿವರ ಭೇಟಿ

ADVERTISEMENT

ಜಲಜೀವನ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಮಹತ್ವದ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಖರ್ಗೆ, ಎರಡು ಜಿಲ್ಲೆಗಳ 1,672 ಜನವಸತಿಗಳ ಸುಮಾರು 31.67 ಲಕ್ಷ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಸದರಿ ಯೋಜನೆಯ ಮೂಲಕ ಕಲಬುರಗಿ ಜಿಲ್ಲೆಯ 3,95,858 ಹಾಗೂ ಬೀದರ್ ಜಿಲ್ಲೆಯ 1,74,838 ಮನೆಗಳಿಗೆ ನಳಗಳ ಮೂಲಕ ನಿರಂತರ ಕುಡಿಯುವ ನೀರು ಒದಗಿಸಬಹುದಾಗಿದೆ ಎಂದರು.

ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳು ಅಭಿವೃದ್ದಿಗೆ ಸಹಕಾರಿಯಾಗುವ ಅಂಶಗಳನ್ನು ಹೊಂದಿದೆ ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮಗ್ರ ಅಧ್ಯಯನ ಮಾಡಲಾಗಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸುವುದು ಸೂಕ್ತ ಎಂದು ಮನಗಂಡು ಈ ಯೋಜನೆಯ ಕುರಿತು ಯೋಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸಚಿವರಿಗೆ ವಿವರಿಸಿದರು.

ಅಂದಾಜು ₹ 7,200 ಕೋಟಿ ವೆಚ್ಚದ ಈ ಯೋಜನೆಯ ಮೂಲಕ ಕುಡಿಯುವ ನೀರು ಒದಗಿಸುವುದರ ಜೊತೆಗೆ ಈ ಎರಡೂ ಜಿಲ್ಲೆಗಳ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಹಾಗಾಗಿ, ಈ ಯೋಜನೆಯ ಜಾರಿಗೆ ತಮ್ಮ ಸಹಕಾರ ಹಾಗೂ ಸಲಹೆಗಳು ಅಗತ್ಯವಾಗಿದ್ದು ಜಲಜೀವನ್ ಕಾರ್ಯಕ್ರಮದ ಮೂಲಕ ಗುರಿ ಸಾಧಿಸುವತ್ತ ನಾವು ಮುನ್ನಡೆಯಲಿದ್ದೇವೆ ಹಾಗೂ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಣೆಗೆ ದಿಟ್ಟ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Tags: Additional Chief Secretary of Rural Development and Panchayat Raj Department Anjum Parvejapproval of multi-village drinking water projectDirector of Rural Water Supply Department K. Nagendra Prasad .estimated cost of Rs 7200 crore.Kalaburagi and Bidar districts.Minister Priyank KhargeUnion Minister of State for Water Power V. SomannaUnion Water Power Minister CR .
Previous Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ:ಸಚಿವ ಕೆ.ಜೆ.ಜಾರ್ಜ್

Next Post

ಪ್ಯಾನ್‌ ಇಂಡಿಯನ್‌ ನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್ ಸಿನಿಮಾದ ಪ್ರೀ ಲುಕ್‌ ರಿಲೀಸ್‌;ಜನವರಿ 13ರಂದು ರುದ್ರನ ಅನಾವರಣ.

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪ್ಯಾನ್‌ ಇಂಡಿಯನ್‌ ನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್ ಸಿನಿಮಾದ ಪ್ರೀ ಲುಕ್‌ ರಿಲೀಸ್‌;ಜನವರಿ 13ರಂದು ರುದ್ರನ ಅನಾವರಣ.

ಪ್ಯಾನ್‌ ಇಂಡಿಯನ್‌ ನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್ ಸಿನಿಮಾದ ಪ್ರೀ ಲುಕ್‌ ರಿಲೀಸ್‌;ಜನವರಿ 13ರಂದು ರುದ್ರನ ಅನಾವರಣ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada