• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ
Share on WhatsAppShare on FacebookShare on Telegram

ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ADVERTISEMENT

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಐದು ವರ್ಷದ ದೂರದೃಷ್ಟಿ ಯೋಜನೆಯನ್ನು ಗ್ರಾಮ ಯೋಜನಾ ಸಮಿತಿ ಮತ್ತು ಗ್ರಾಮ ಪಂಚಾಯಿತಿ ಯೋಜನಾ ಸಮಿತಿಗಳ ಸಹಕಾರದೊಂದಿಗೆ ಸಿದ್ದಪಡಿಸಿದೆ. ದೂರದೃಷ್ಟಿ ಯೋಜನೆಯಲ್ಲಿ 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು ಅದಕ್ಕೆ ಪೂರಕವಾದ ಎಲ್ಲಾ ಚಟುವಟಿಕೆಗಳನ್ನು ಯೋಜನೆಯಲ್ಲಿ ಗುರುತಿಸಿ 2023-24ನೇ ಸಾಲಿನಿಂದ 2028-29ನೇ ಸಾಲಿನವರೆಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಲಾಗಿದೆ.

ಈ ದೂರದೃಷ್ಟಿ ಯೋಜನೆ ಆಧರಿಸಿ ಗ್ರಾಮ ಪಂಚಾಯಿತಿಗಳು ಸಮಗ್ರ ಭಾಗವಹಿಸುವಿಕೆಯನ್ನು ಒಳಗೊಂಡ ವಾರ್ಷಿಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು, ಅದಕ್ಕೂ ಮುನ್ನ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವ ಸಲುವಾಗಿ ಸರಣಿ ಚಟುವಟಿಕೆಗಳನ್ನು ಅಭಿಯಾನದ ರೂಪದಲ್ಲಿ ಹಮ್ಮಿಕೊಳ್ಳಬೇಕು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಪಾಲಿಸಬೇಕೆಂದು ಸಚಿವರು ಹೇಳಿದ್ದಾರೆ.
ವಾರ್ಷಿಕ ಕ್ರಿಯಾ ಯೋಜನೆಯ ಎಲ್ಲಾ ಚಟುವಟಿಕೆಗಳನ್ನು ಗ್ರಾಮ ಪಂಚಾಯಿತಿಗಳ ಐದು ವರ್ಷದ ದೂರದೃಷ್ಟಿ ಯೋಜನೆಯ ಗುರಿಯ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸವುದು. ಸಮುದಾಯದ ಸಹಭಾಗಿತ್ವದೊಂದಿಗೆ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವುದು. ಗ್ರಾಮ ಪಂಚಾಯಿತಿಯ ಎಲ್ಲಾ ಅನುದಾನದ ಮೂಲಗಳು ಒಳಗೊಂಡಂತೆ ಒಂದು ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವುದು.

ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆಯಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಹಂತದ ಇತರೆ ಅಭಿವೃದ್ಧಿ ಇಲಾಖೆಗಳ ಅನುದಾನ, ಯೋಜನೆಗಳು, ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳುವುದು. ಗ್ರಾಮ ಪಂಚಾಯಿತಿ ಹಂತದಲ್ಲಿ ಕೈಗೊಳ್ಳಲಾಗುವ ಕಡಿಮೆ ಖರ್ಚಿನಲ್ಲಿ ನಿರ್ವಹಿಸುವ ಚಟುವಟಿಕೆಗಳು ಹಾಗೂ ವೆಚ್ಚಗಳನ್ನು ಭರಿಸದೆ ಕೈಗೊಳ್ಳಬಹುದಾದ ಚಟುವಟಿಕೆಗಳನ್ನು ಗುರುತಿಸುವುದು. ಯೋಜನೆವಾರು ಅವಶ್ಯವಿರುವ ಚಟುವಟಿಕೆಗಳನ್ನು ಕಡ್ಡಾಯವಾಗಿ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯ ಅಂಗವಾಗಿರುವುದನ್ನು ಖಾತರಿಪಡಿಸಿಕೊಂಡು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಗ್ರಾಮ ಪಂಚಾಯತಿಗಳಿಗೆ ಸೂಚಿಸಿದ್ದಾರೆ.

Tags: BJPcongressCongress PartyDepartment of Rural Development and Panchayat RajGraminaPanchayath RajPriyanka Khargeಬಿಜೆಪಿಸಿದ್ದರಾಮಯ್ಯ
Previous Post

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು: ಎಲ್ಲಾ ಪಕ್ಷದ ಶಾಸಕರನ್ನು ಕೇಳಿದ ಸಿಎಂ

Next Post

ಬಿಜೆಪಿ ಶಾಸಕರ ಕಾರು ಚಾಲಕ ಆತ್ಮಹತ್ಯೆ.. ಸಂಬಂಧಿಕರ ಅನುಮಾನ..

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಬಿಜೆಪಿ ಶಾಸಕರ ಕಾರು ಚಾಲಕ ಆತ್ಮಹತ್ಯೆ.. ಸಂಬಂಧಿಕರ ಅನುಮಾನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada