• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದಲ್ಲಿ ಜಿಟಿ ದೇವೇಗೌಡ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ..

ಪ್ರತಿಧ್ವನಿ by ಪ್ರತಿಧ್ವನಿ
January 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೂಡದಲ್ಲಿ ಮತ್ತೊಂದು ಅಕ್ರಮ ಬಯಲಾಗಿದೆ ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಿಂದ ಜಿಟಿ ದೇವೇಗೌಡಗೆ ಸಂಕಷ್ಟ ಶುರುವಾಗಿದೆ. 

ADVERTISEMENT

ಜಿಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ  ಮೂಡದಲ್ಲಿ ಅಕ್ರಮವಾಗಿ  ಪುತ್ರಿ ಮತ್ತು ಅಳಿಯನಿಗೆ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿ  ಸ್ನೇಹಮಯಿ ಕೃಷ್ಣ  ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. ಬಳಿಕ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಚೌಡಯ್ಯ ಎಂಬುವವರ ಹೆಸರಿಗೆ 50:50 ಅನುಪಾತದಲ್ಲಿ ಒಟ್ಟು ಆರು ನಿವೇಶನಗಳನ್ನು ಅಕ್ರಮವಾಗಿ ಕೊಡಿಸಿದ್ದಾರೆ. ಇದರಲ್ಲಿ, 50X80 ಅಡಿ ಅಳತೆಯ ಎರಡು ನಿವೇಶನಗಳನ್ನು, ಅವರ ಮಗಳು ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯನವರ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ದೇವನೂರು ಗ್ರಾಮದ ಸರ್ವೆ ನಂ.154ರ ಆರ್.ಟಿ.ಸಿ ಪ್ರತಿಯಲ್ಲಿನ 9ನೇ ಕಾಲಂನಲ್ಲಿ ಜವರಯ್ಯ, ಕೆ.ಬೋರಯ್ಯ, ಚೌಡಯ್ಯ, ಪುಟ್ಟಣ್ಣಯ್ಯ, ಗಂಗಾಧರ ಎಂಬುವವರ ಹೆಸರಿಗೆ 3.38 ಎಕರೆ ಜಮೀನಿನ ಜಂಟಿ ಖಾತೆ ಇದೆ. 

ಈ ಜಮೀನು ನಗರದ ಭೂಮಿತಿ ಕಾಯಿದೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಸರ್ಕಾರ ವಶಕ್ಕೆ ಪಡೆದಿದೆಯೇ? ಅಥವಾ ಕಾಯಿದೆಯಿಂದ ಕೈಬಿಡಲಾಗಿದೆಯೆ? ಕೈಬಿಟ್ಟಿದ್ದರೆ ಆರ್ಟಿಸಿಯಲ್ಲಿ ಈಗಲೂ ಉಲ್ಲೇಖ ಇರಲು ಕಾರಣವೇನು? ಪ್ರಾಧಿಕಾರದಿಂದ ಜಮೀನನ್ನು ಸ್ವಾಧೀನಕ್ಕೆ ಪಡೆಯಲಾಗಿದೆಯೇ? ಯಾವಾಗ ಸ್ವಾಧೀನಕ್ಕೆ ಪಡೆಯಲಾಗಿದೆ? ಆ ಸಂದರ್ಭದಲ್ಲಿ ಯಾರಿಗೆ ಪರಿಹಾರದ ಹಣವನ್ನು ನೀಡಲಾಗಿದೆ? ಅಥವಾ ಪರಿಹಾರ ನೀಡಿಲ್ಲವೇ? ಜಮೀನಿನಲ್ಲಿ ಪ್ರಾಧಿಕಾರದಿಂದ ಬಡಾವಣೆ ರಚನೆ ಮಾಡಲಾಗಿದೆಯೇ? ಯಾವಾಗ ಬಡಾವಣೆ ರಚನೆ ಮಾಡಲಾಗಿದೆ? ಎಂಬ ಅಂಶಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಜಿಟಿಡಿ ಪುತ್ರಿ, ಅಳಿಯನ ಹೆಸರಿಗೆ ಜಮೀನು

ಮೈಸೂರಿನ ವಿಜಯನಗರ 4ನೇ ಹಂತದ 2ನೇ ಘಟ್ಟದ ನಿವೇಶನ ಸಂಖ್ಯೆ-12257 ಮತ್ತು 12259 ಸಂಖ್ಯೆಯ 50X80 ಅಳತೆಯ ನಿವೇಶನಗಳನ್ನು ಜಿಟಿ ದೇವೇಗೌಡ ಪುತ್ರಿ ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯಗೆ 2023ರ ನವೆಂಬರ್ 11 ರಂದು ಕ್ರಯಪತ್ರಗಳನ್ನು ನೊಂದಣಿ ಮಾಡಲಾಗಿದೆ.

ಇದೇ ನಿವೇಶನಗಳನ್ನು ಪ್ರಾಧಿಕಾರದಿಂದ ಚೌಡಯ್ಯ ಎಂಬುವರಿಗೆ 2023ರ ಅಕ್ಟೋಬರ್ 19 ರಂದು ಕ್ರಯಪತ್ರ ನೊಂದಣಿ ಮಾಡಲಾಗಿದೆ. ಅದಾದ ಕೇವಲ ಸುಮಾರು 19 ದಿನಗಳ ಅಂತರದಲ್ಲೇ ಜಿಟಿ ದೇವೇಗೌಡ ಪುತ್ರಿ ಡಿ.ಅನ್ನಪೂರ್ಣ ಮತ್ತು ಜಿ.ಎಂ.ವಿಶ್ವೇಶ್ವರಯ್ಯಗೆ ಕ್ರಯಪತ್ರಗಳನ್ನು ನೊಂದಣಿ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೈಸೂರು ನಗರ ಭೂಮಿತಿ ಕಾಯಿದೆಯ ವ್ಯಾಪ್ತಿಗೆ ಒಳಪಡುವ ಮತ್ತು ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ, ಶಾಸಕ ಜಿ.ಟಿ. ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿ, ಮುಡಾದಿಂದ ಟಿ.ಚೌಡಯ್ಯ ಹೆಸರಿಗೆ ಅಕ್ರಮವಾಗಿ 50:50 ಅನುಪಾತದಲ್ಲಿ 6 ನಿವೇಶನಗಳನ್ನು ಮಂಜೂರಾತಿ ಮಾಡಿಸಿ, ಅದರಲ್ಲಿ 2 ನಿವೇಶನಗಳನ್ನು ಅವರ ಮಗಳು ಅನ್ನಪೂರ್ಣ ಮತ್ತು ಅಳಿಯ ವಿಶ್ವೇಶ್ವರಯ್ಯ ಹೆಸರಿನಲ್ಲಿ ಪಡೆದುಕೊಂಡಿದ್ದಾರೆ.

ಈ ಮೂಲಕ ಪ್ರಾಧಿಕಾರಕ್ಕೆ ವಂಚನೆ ಮತ್ತು ನಷ್ಟ ಉಂಟು ಮಾಡಿರುವ ಬಗ್ಗೆ ಖಚಿತ ಪಡಿಸಿಕೊಂಡು, ಜಿ.ಟಿ.ದೇವೇಗೌಡ, ಚೌಡಯ್ಯ, ಅನ್ನಪೂರ್ಣ, ವಿಶ್ವೇಶ್ವರಯ್ಯ ಮತ್ತು “ಪ್ರಾಧಿಕಾರ”ದ ಅಧಿಕಾರಿಗಳನ್ನು 11/2024 ಸಂಖ್ಯೆಯ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Tags: congressGT DevegowdaJDSMUDAmuda sitesMysoreMysore UrbonRTIsiddaramaiahsiddaramaiah wifesnehamayi krishna
Previous Post

5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ: MB ಪಾಟೀಲ್

Next Post

ಕಾಡಿನ ಟ್ರೇಲರ್ ಗೆ ನಾಡಿನ ಜನತೆ ಫಿದಾ.

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಕಾಡಿನ ಟ್ರೇಲರ್ ಗೆ ನಾಡಿನ ಜನತೆ ಫಿದಾ.

ಕಾಡಿನ ಟ್ರೇಲರ್ ಗೆ ನಾಡಿನ ಜನತೆ ಫಿದಾ.

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!