ಬೆಳಗಾವಿಯಲ್ಲಿ (Belagavi) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತಕ್ಕೀಡಾಗಿದೆ. ಆದ್ರೆ ಅದೃಷ್ಟವಶಾತ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕೂಡ ಇದ್ದರು ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಘಟನೆ ನಡೆದಿದ್ದು, ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಕಾರಿಗೆ ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಗುದ್ದಿ ಕಾರು ಅಪಘಾತಕ್ಕೀಡಾಗಿದೆ.

ಈ ವೇಳೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜಗುಜ್ಜಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸಚಿವರು ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ಅಪಘಾತ ನಡೆದಿದ್ದು,ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.