ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಪ್ರೀತಂ ಗೌಡ ಆಪ್ತರೊಬ್ಬರು ಬಹಿರಂಗ ಪಡಿಸಿದ್ದು, ಇದು ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಆಘಾತವಾಗಿದೆ. ಬಿಜೆಪಿಯ ಯುವ ಮುಖಂಡರಲ್ಲಿ ಪ್ರಮುಖರಾಗಿರುವ ಪ್ರೀತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ ಎನ್ನುವ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು, ಒಂದು ವೇಳೆ ಏನಾದರೂ ಪ್ರೀತಂ ಗೌಡ ಬಿಜೆಪಿ ಪಕ್ಷದಿಂದ ಹೊರಬಂದು ಆಡಳಿತಾರೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರೆ ಕಾಂಗ್ರೆಸ್‌ಗೆ ಪಕ್ಷಕ್ಕೆ ಭಾರೀ ಲಾಭವಾಗಲಿದೆ. ಏಕೆಂದರೆ ಜೆಡಿಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುವ ಹಾಸನದಲ್ಲಿ ಕಾಂಗ್ರೆಸ್ ಮತ್ತೆ ಪಾರುಪತ್ಯ ಸಾಧಿಸಲು ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಬಹಳಷ್ಟು ಕಷ್ಟಪಡುತ್ತಿದ್ದಾರೆ. ಪ್ರೀತಂ ಬಂದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗುತ್ತದೆ.

ಕಳೆದ ಕೆಲ ದಿನಗಳಿಂದ ಬಿಜೆಪಿ ಕಾರ್ಯಕ್ರಮಗಳಲ್ಲಿ ಮತ್ತು ಬಿಜೆಪಿ ವೇದಿಕೆಗಳಲ್ಲಿ ಅವರು ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಹಾಸನದಲ್ಲಿ ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಂಶದ ವಿರುದ್ಧ ಹೋರಾಡಿದ ಪ್ರೀತಮ್ ಬಿಜೆಪಿ-ಜೆಡಿಎಸ್ ಸಮ್ಮಿಶ್ರದಲ್ಲಿ ಸಂತೋಷವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯವರೆಗೆ, 2023ರಲ್ಲಿ, ಕಾಂಗ್ರೆಸ್ ಒಲ್ಲದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿತ್ತು, 2023ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಅವರು ಮತ ಕೇಳಲು ಕ್ಷೇತ್ರಕ್ಕೆ ಭೇಟಿ ನೀಡಲಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಬ್ಬರೂ ಸಹ ಹಾಸದಲ್ಲಿ ಕಾಂಗ್ರೆಸ್ ಪ್ರಾಭಲ್ಯ ಸಾಧಿಸುವಲ್ಲಿ ಕಷ್ಟಪಡುತ್ತಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ. ಮೂರೂ ಪಕ್ಷಗಳಲ್ಲಿ ಆಂತರಿಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ.
ಮೂರೂ ಪಕ್ಷಗಳಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.

ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.