ಮುಖ್ಯಮಂತ್ರಿ ಸಿದ್ದರಾಮಯ್ಯರ (Cm siddaramaiah) ಅಕ್ರಮಗಳ ಕೈ ನ ಆಳ-ಅಗಲ ಇಂಚಿಂಚು ಬಟ ಬಯಲಾಗುತ್ತಲೇ ಇದೆ. ಮುಡಾ (MUDA) ಹಗರಣದ A1 ಆರೋಪಿ ಸಿದ್ದರಾಮಯ್ಯ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ (DB Natesh) ಮೇಲೆ ರಾಜಕೀಯ ಪ್ರಭಾವ ಬೀರಿ, ಪತ್ನಿ ಪಾರ್ವತಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಇ.ಡಿ. ಸತ್ಯ ಹೊರಹಾಕಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಮುಡಾ ಪ್ರಕರಣದ ತನಿಖೆಯ ಭಾಗವಾಗಿ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿಗಳನ್ನು ಇ.ಡಿ. ಮುಟ್ಟುಗೋಲು ಹಾಕಿಕೊಂಡಿದೆ. 50:50ರ ಅನುಪಾತದಲ್ಲಿ ಅಕ್ರಮವಾಗಿ 1094 ನಿವೇಶನಗಳನ್ನು ಅಕ್ರಮವಾಗಿ ಬೇನಾಮಿ ಹೆಸರಲ್ಲಿ ಹಂಚಿಕೆ ಮಾಡಿ ನೂರಾರು ಕೋಟಿ ಲಾಭ ಮಾಡಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಉಲ್ಲೇಖಿಸಿರುವುದು, ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಸತ್ಯ ಎನ್ನುವುದು ಮತ್ತೆ ಸಾಬೀತಾಗಿದೆ.
ಹಗರಣದಲ್ಲಿ ನನ್ನ ಪಾತ್ರ ಏನಿಲ್ಲ ಎಂದು ವೈಟ್ನರ್ ಹಚ್ಚಿ, ತಿಪ್ಪೆಸಾರುತ್ತಿದ್ದ ಮುಡಾರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮರ್ಯಾದೆಯಿಂದ ನಿರ್ಗಮಿಸಿ ಎಂದು ಜೆಡಿಎಸ್ ಆಗ್ರಹಿಸಿದೆ.





